ಭಾನುವಾರ, ಅಕ್ಟೋಬರ್ 25, 2020
28 °C

‘ಬಿಜೆಪಿಯ ದೊಡ್ಡ ನಾಯಕರು ಅಫೀಮಿಲ್ಲದೆ ಹೊರಬರುತ್ತಿರಲಿಲ್ಲ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಬಿಜೆಪಿಯ ಕೆಲವು ದೊಡ್ಡ ನಾಯಕರು ಅಫೀಮು ಸೇವಿಸದೇ ಮನೆಯಿಂದ ಈಚೆಗೆ ಬರುತ್ತಿರಲೇ ಇಲ್ಲ. ಅದೆಲ್ಲವೂ ನಮಗೆ ಗೊತ್ತಿದೆ. ಆದರೆ, ಅವರ ಹೆಸರು ಹೇಳಲು ಬಯಸುವುದಿಲ್ಲ’ ಎಂದು ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್‌ ಮುಖಂಡ ಬಿ.ಕೆ. ಹರಿಪ್ರಸಾದ್‌ ಆರೋಪಿಸಿದರು.

‘ಡ್ರಗ್ಸ್‌ ವಿಚಾರದಲ್ಲಿ ಒಂದು ಧರ್ಮದವರನ್ನು ಗುರಿಯಾಗಿಸುವುದು ತಪ್ಪು. ಕಾನೂನು ಬಾಹಿರವಾದ ಕೆಲಸವನ್ನು ಯಾವುದೇ ಧರ್ಮ ಅಥವಾ ಪಕ್ಷದವರು ಮಾಡಿದ್ದರೂ ಕಠಿಣ ಕ್ರಮ ಕೈಗೊಳ್ಳಬೇಕು. ಆದರೆ, ಈಗ ಕೇವಲ ಹೆಣ್ಮಕ್ಕಳನ್ನಷ್ಟೆ ದೂರಲಾಗುತ್ತಿದೆ. ಗಂಡಸರ‍್ಯಾರೂ ಅಫೀಮು, ಗಾಂಜಾ ಪ್ರಕರಣದಲ್ಲಿ ಶಾಮೀಲಾಗಿಲ್ಲವೆ? ಕೋವಿಡ್–19 ನಿರ್ವಹಣೆಯಲ್ಲಿ ಆಗಿರುವ ವೈಫಲ್ಯಗಳನ್ನು ಮುಚ್ಚಿಹಾಕಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗಾಂಜಾ ವಿಚಾರದಲ್ಲಿ ಸೆಲೆಬ್ರಿಟಿಗಳನ್ನು ಟಾರ್ಗೆಟ್ ಮಾಡುತ್ತಿವೆ’ ಎಂದರು.

‘ಕಾನೂನುಬಾಹಿರ ಚಟುವಟಿಕೆಗಳೇನೇ ನಡೆದರೂ ಅಲ್ಪಸಂಖ್ಯಾತ ನಾಯಕರೇ ಜವಾಬ್ದಾರರು ಎಂದು ಬಿಂಬಿಸುವುದು ಬಿಜೆಪಿಯರಿಗೆ ಫ್ಯಾಷನ್‌ ಆಗಿಬಿಟ್ಟಿದೆ’ ಎಂದು ಅವರು ಟೀಕಿಸಿದರು.

‘ಅಲ್ಪಸಂಖ್ಯಾತರನ್ನು ಟಾರ್ಗೆಟ್‌ ಮಾಡುವುದೇ ಆರ್‌ಎಸ್‌ಎಸ್‌, ಬಿಜೆಪಿಯ ಮೂಲ ಉದ್ದೇಶ. ಅದು 1923ರಿಂದಲೂ ನಡೆದುಕೊಂಡು ಬಂದಿದೆ’ ಎಂದು ಹರಿಪ್ರಸಾದ್ ವ್ಯಂಗ್ಯವಾಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು