ಮಂಗಳವಾರ, ಜೂನ್ 15, 2021
21 °C

ಕೋವಿಡ್‌ ನಿರ್ವಹಣೆ: ಸಿ.ಎಂ ಯಡಿಯೂರಪ್ಪ ಭೇಟಿ ಮಾಡಿದ ಸಂತೋಷ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್ ಅವರು ಮಂಗಳವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸುಮಾರು ಒಂದು ತಾಸು ಮಾತುಕತೆ ನಡೆಸಿದರು.

ರಾಜ್ಯದಲ್ಲಿ ಕೋವಿಡ್‌ ನಿರ್ವಹಣೆಗೆ ಸಂಬಂಧಿಸಿದಂತೆ ಅವರು ಮುಖ್ಯಮಂತ್ರಿ ಜತೆ ಚರ್ಚೆ ನಡೆಸಿದರು.

‘ಕೋವಿಡ್ ನಿರ್ವಹಣೆ ವಿಷಯದಲ್ಲಿ ರಾಜ್ಯಕ್ಕೆ ಅಗತ್ಯವಿರುವ ಎಲ್ಲ ನೆರವುಗಳನ್ನು ಒದಗಿಸಲು ಕೇಂದ್ರದ ಸಚಿವರ ಜತೆ ಮಾತುಕತೆ ನಡೆಸುತ್ತೇನೆ. ಆ ಕುರಿತು ತಮಗೆ ಮಾಹಿತಿ ನೀಡುವಂತೆ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದರು’ ಎಂದು ಮೂಲಗಳು ತಿಳಿಸಿವೆ.

ಆ ಬಳಿಕ ಅವರು ಪಕ್ಷದ ಕಚೇರಿಯಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಮತ್ತು ಇತರ ಮುಖಂಡರನ್ನು ಭೇಟಿಯಾದರು. ಇತ್ತೀಚೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯ ಗೃಹ ಮತ್ತು ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಮತ್ತು ಬಿ.ವೈ.ವಿಜಯೇಂದ್ರ ಅವರನ್ನು ಕರೆಸಿಕೊಂಡು ಆಮ್ಲಜನಕ ಹಂಚಿಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು