ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಪ್ಪು ಶಿಲೀಂಧ್ರ ಸೋಂಕು: ರಾಜ್ಯದ 51 ಮಂದಿ ಮರಣ

Last Updated 1 ಜೂನ್ 2021, 19:53 IST
ಅಕ್ಷರ ಗಾತ್ರ

ಬೆಂಗಳೂರು: ಕಪ್ಪು ಶಿಲೀಂಧ್ರ ಸೋಂಕಿಗೆ ಒಳಗಾಗುವವರ ಸಂಖ್ಯೆ ರಾಜ್ಯದಲ್ಲಿ ಏರಿಕೆ ಕಂಡಿದೆ. ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ 1,370 ಮಂದಿಯಲ್ಲಿ ಈ ಸೋಂಕು ಕಾಣಿಸಿಕೊಂಡಿದ್ದರೆ, ಅವರ ಪೈಕಿ 51 ಮಂದಿ ಮೃತಪಟ್ಟಿದ್ದಾರೆ.

ಕೋವಿಡ್ ಪೂರ್ವದಲ್ಲಿ ಅಪರೂಪವಾಗಿದ್ದ ಶಿಲೀಂಧ್ರ ಸೋಂಕು, ಈಗ ಮಕ್ಕಳು ಸೇರಿದಂತೆ ವಿವಿಧ ವಯೋಮಾನದವರಲ್ಲಿ ಕಾಣಿಸಿಕೊಳ್ಳುತ್ತಿದೆ.

ಕೇವಲ ಎರಡು ದಿನಗಳಲ್ಲಿಯೇ 100ಕ್ಕೂ ಅಧಿಕ ಪ್ರಕರಣಗಳು ವರದಿಯಾಗಿದ್ದು, 10ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಕೊಡಗು ಹಾಗೂ ಚಾಮರಾಜನಗರ ಹೊರತುಪಡಿಸಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕಪ್ಪು ಶಿಲೀಂಧ್ರ ಸೋಂಕು ಪ್ರಕರಣಗಳು ವರದಿಯಾಗಿವೆ. ಇದೇ ವೇಳೆ, ಬೌರಿಂಗ್ ಸೇರಿದಂತೆ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ‘ಲಿಪೋಸೋಮಲ್ ಅ್ಯಂಫೊಟೆರಿಸಿನ್ ’ ಔಷಧದ ಕೊರತೆ ಮುಂದುವರೆದಿದೆ.

5 ಜಿಲ್ಲೆಗಳಲ್ಲಿ 50ಕ್ಕೂ ಅಧಿಕ ಪ್ರಕರಣ: ಬೆಂಗಳೂರು ನಗರದಲ್ಲಿ 521, ಧಾರವಾಡದಲ್ಲಿ 119, ಕಲಬುರ್ಗಿಯಲ್ಲಿ 102, ಬಾಗಲಕೋಟೆಯಲ್ಲಿ 68, ವಿಜಯಪುರದಲ್ಲಿ 57 ಕಪ್ಪು ಶಿಲೀಂಧ್ರ ಸೋಂಕು ಪ್ರಕರಣಗಳು ವರದಿಯಾಗಿವೆ. ಕೋಲಾರದಲ್ಲಿ 42, ಶಿವಮೊಗ್ಗದಲ್ಲಿ 38, ರಾಯಚೂರಿನಲ್ಲಿ 36, ಮೈಸೂರು ಹಾಗೂ ಬೆಳಗಾವಿಯಲ್ಲಿ ತಲಾ 35, ಚಿತ್ರದುರ್ಗದಲ್ಲಿ 33, ದಕ್ಷಿಣ ಕನ್ನಡದಲ್ಲಿ 24, ದಾವಣಗೆರೆ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ ತಲಾ 21 ಪ್ರಕರಣಗಳು ದೃಢಪಟ್ಟಿವೆ. ಉಳಿದ ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆ 20ಕ್ಕಿಂತ ಕಡಿಮೆಯಿದೆ.

ರಾಜ್ಯದ 16 ಜಿಲ್ಲೆಗಳಲ್ಲಿ ಮರಣ ಪ್ರಕರಣಗಳು ವರದಿಯಾಗಿವೆ. ಧಾರವಾಡದಲ್ಲಿ 14 ಮಂದಿ, ಬೆಂಗಳೂರು ನಗರದಲ್ಲಿ 6 ಮಂದಿ, ಶಿವಮೊಗ್ಗ ಹಾಗೂ ಕಲಬುರ್ಗಿಯಲ್ಲಿ ತಲಾ 5 ಮಂದಿ, ದಕ್ಷಿಣ ಕನ್ನಡದಲ್ಲಿ 4 ಮಂದಿ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೋಲಾರ ಹಾಗೂ ಕೊಪ್ಪಳದಲ್ಲಿ ತಲಾ ಇಬ್ಬರು, ಬಾಗಲಕೋಟೆ, ಬೆಳಗಾವಿ, ಬೀದರ್, ಚಿಕ್ಕಮಗಳೂರು, ರಾಯಚೂರು ಹಾಗೂ ಯಾದಗಿರಿಯಲ್ಲಿ ತಲಾ ಒಬ್ಬರು ಸಾವಿಗೀಡಾಗಿರುವುದು ದೃಢಪಟ್ಟಿದೆ.

ಸೋಂಕಿತರಲ್ಲಿ ಸದ್ಯ 1,292 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈವರೆಗೆ 27 ಮಂದಿ ಕಾಯಿಲೆಯಿಂದ ಚೇತರಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT