ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಮತದಾರರ ಮಾಹಿತಿ ಕಳವು ಮಾಡಿರುವ ಆರೋಪದಲ್ಲಿ ತನಿಖೆ ಎದುರಿಸುತ್ತಿರುವ ಚಿಲುಮೆ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯನ್ನು ಕಪ್ಪುಪಟ್ಟಿಗೆ ಸೇರಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.

28 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಗುರುತಿನ ಚೀಟಿ ಮತ್ತು ಆಧಾರ್ ಜೋಡಣೆಯನ್ನು ವಿಎಚ್‌ಎ(ವೋಟರ್ ಹೆಲ್ಪ್‌ಲೈನ್ ಆ್ಯಪ್) ಮೂಲಕ ಮಾಡಲು ಮತ್ತು ಮತದಾರರಲ್ಲಿ ಅರಿವು ಮೂಡಿಸಲು ಅನುಮತಿ ನೀಡಲಾಗಿತ್ತು.

ಅನುಮತಿ ಪತ್ರಕ್ಕೆ ವ್ಯತಿರಿಕ್ತವಾಗಿ ಗುರುತಿನ ಚೀಟಿಯನ್ನು ಸೃಷ್ಟಿಸಿಕೊಂಡು ನೈಜ ಬಿಎಲ್ಒಗಳೆಂದು ಬಿಂಬಿಸಿ ಸಾರ್ವಜನಿಕರಿಗೆ ಮೋಸ ಮಾಡಿರುವುದು ದಾಖಲೆ ಮತ್ತು ವರದಿಗಳಿಂದ ದೃಢಪಟ್ಟಿದೆ. ಈ ಸಂಸ್ಥೆಯಾಗಲಿ, ಸಂಸ್ಥೆಯ ನಿರ್ದೇಶಕರು ಅಥವಾ ಅವರ ಸಹಭಾಗಿತ್ವದಲ್ಲಿ ನಡೆಸಲಾಗುವ ಯಾವುದೇ ಸಂಸ್ಥೆಯು ಪಾಲಿಕೆಯ ಸೇವೆ ಮತ್ತು ಸಂಗ್ರಹಣೆಯ ಟೆಂಡರ್‌ಗಳಲ್ಲಿ ಭಾಗವಹಿಸುವುದನ್ನು ನಿರ್ಬಂಧಿಸಲಾಗಿದೆ ಎಂದು ಆದೇಶದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.