ಶನಿವಾರ, ಅಕ್ಟೋಬರ್ 23, 2021
21 °C

ಪದ್ಮರಾಜ ದಂಡಾವತಿ, ಹರೀಶ್ ಹಾಗಲವಾಡಿಗೆ ಬಿ.ಎಂ.ಶ್ರೀ. ಪ್ರತಿಷ್ಠಾನ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿ.ಎಂ.ಶ್ರೀ ಪ್ರತಿಷ್ಠಾನ ಕೊಡಮಾಡುವ ‘ಶಾ. ಬಾಲೂರಾವ್ ಅನುವಾದ ಪ್ರಶಸ್ತಿ’ಗೆ ಪತ್ರಕರ್ತ ಪದ್ಮರಾಜ ದಂಡಾವತಿ ಅವರು ಅನುವಾದಿಸಿದ ಕೃತಿ ‘ಸೀತಾ’  ಹಾಗೂ ‘ಶಾ. ಬಾಲೂರಾವ್ ಯುವ ಬರಹಗಾರ ಪ್ರಶಸ್ತಿ’ಗೆ ಹರೀಶ್ ಹಾಗಲವಾಡಿ ಅವರ ‘ಋಷ್ಯಶೃಂಗ’ ಕೃತಿ ಆಯ್ಕೆಯಾಗಿದೆ.

2020ರಲ್ಲಿ ಮೊದಲ ಮುದ್ರಣಗೊಂಡ ಕೃತಿಗಳನ್ನು ಈ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ. ಅನುವಾದ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಪ್ರೊ.ಎಂ.ಎಸ್. ರಘುನಾಥ್ ಹಾಗೂ ಪ್ರೊ. ನಗರಗೆರೆ ರಮೇಶ್ ಇದ್ದರು. ಯುವ ಬರಹಗಾರರ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಡಾ. ಆನಂದರಾಮ ಉಪಾಧ್ಯ ಮತ್ತು ಡಾ.ಜಿ.ವಿ.ಆನಂದಮೂರ್ತಿ ಇದ್ದರು. ಈ ಪ‍್ರಶಸ್ತಿಗಳು ತಲಾ ₹ 25 ಸಾವಿರ ನಗದು, ಫಲಕವನ್ನು ಒಳಗೊಂಡಿವೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ.ಆರ್. ಲಕ್ಷ್ಮೀನಾರಾಯಣ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು