ಗುರುವಾರ , ಆಗಸ್ಟ್ 5, 2021
29 °C

ಲಾಕ್‌ಡೌನ್ ಇನ್ನಷ್ಟು ಸಡಿಲ: ಕಾರ್ಯಾಚರಣೆಗೆ ಬಿಎಂಟಿಸಿ ಸಿದ್ಧತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಲಾಕ್‌ಡೌನ್ ಇನ್ನಷ್ಟು ಸಡಿಲಗೊಳಿಸಿ ಬಸ್‌ ಸಂಚಾರಕ್ಕೆ ಸರ್ಕಾರ ಅವಕಾಶ ನೀಡುವ ಸಾಧ್ಯತೆ ಇರುವ ಕಾರಣ ಕಾರ್ಯಾಚರಣೆ ಆರಂಭಿಸಲು ಬಿಎಂಟಿಸಿ ಸಿದ್ಧತೆ ನಡೆಸಿದೆ.

ಡಿಪೊಗಳಲ್ಲೇ ನಿಂತು ದೂಳು ಹಿಡಿದಿದ್ದ ಬಸ್‌ಗಳನ್ನು ತೊಳೆದು ಸುಸ್ಥಿತಿಯಲ್ಲಿ ಇಡುವ ಕೆಲಸವನ್ನು ಸಿಬ್ಬಂದಿ ಆರಂಭಿಸಿದ್ದಾರೆ. ಸರ್ಕಾರ ಅನುಮತಿ ನೀಡಿದರೆ ಸೋಮವಾರ
ದಿಂದ ಮೊದಲ ಹಂತದಲ್ಲಿ 2,200 ಬಸ್‌ಗಳ ಕಾರ್ಯಾಚರಣೆ ಮಾಡಲು ಸಂಸ್ಥೆ ನಿರ್ಧರಿಸಿದೆ.

ಈ ಬಗ್ಗೆ ಮಾಹಿತಿ ನೀಡಿದ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ.ಶಿಖಾ, ‘ಸರ್ಕಾರದ ಅನುಮತಿಗಾಗಿ ಕಾಯುತ್ತಿದ್ದೇವೆ. ಅನುಮತಿ ಸಿಕ್ಕರೆ ಶೇ 50ರಷ್ಟು ಸೀಟುಗಳ ಭರ್ತಿ ಆಧಾರದಲ್ಲಿ ಕಾರ್ಯಾಚರಣೆ ಮಾಡಲಾಗುವುದು’ ಎಂದು ತಿಳಿಸಿದರು.

‘ಮೊದಲ ಹಂತದಲ್ಲಿ ದಿನಕ್ಕೆ 2,200 ಬಸ್‌ಗಳ ಸೇವೆಯನ್ನು ಆರಂಭಿಸಲಿದ್ದೇವೆ. ನಂತರ ಪ್ರಯಾಣಿಕರ ದಟ್ಟಣೆ ನೋಡಿಕೊಂಡು ಕಾರ್ಯಾಚರಣೆ ಹೆಚ್ಚಿಸಲಾಗುವುದು. ಗೂಗಲ್‌ ಪೇ, ಫೋನ್‌ ಪೇ ಮೂಲಕ ಹಣ ಪಾವತಿಸಿ ಟಿಕೆಟ್‌ ಪಡೆಯುವ ವ್ಯವಸ್ಥೆಗೂ ಒತ್ತು ನೀಡಲಾಗುವುದು. ಪ್ರತಿ ಟ್ರಿಪ್‌ ಬಳಿಕ ಬಸ್‌ಗಳಿಗೆ ಸೋಂಕು ನಿವಾರಕ ದ್ರಾವಣ ಸಿಂಪಡಿಸಿ ಸ್ವಚ್ಛಗೊಳಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದು ವಿವರಿಸಿದರು.

‘ಕಾರ್ಯಾಚರನೆಗೆ ಕೋವಿಡ್ ಲಸಿಕೆ ಪಡೆದ ಸಿಬ್ಬಂದಿಯನ್ನು ಆದ್ಯತೆ ಮೇರೆಗೆ ಬಳಸಿಕೊಳ್ಳಲಾಗುವುದು. ಲಸಿಕೆ ಪಡೆದಿದ್ದವರು ಕೋವಿಡ್ ಪರೀಕ್ಷೆ ಮಾಡಿಸುವ ಅವಶ್ಯಕತೆ ಇಲ್ಲ. ಉಳಿದವರು ಕೋವಿಡ್‌ ಪರೀಕ್ಷೆ ಮಾಡಿಸಿಕೊಂಡು, ಸೋಂಕು ಇಲ್ಲದಿರುವುದನ್ನು ದೃಢಪಡಿಸಿದ ವರದಿ ಪಡೆದು ಕರ್ತವ್ಯಕ್ಕೆ ಹಾಜರಾಗಬೇಕಾಗುತ್ತದೆ’ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು