ಶನಿವಾರ, ಮೇ 28, 2022
30 °C

ಹೆಚ್ಚುತ್ತಿರುವ ಕೋವಿಡ್‌: ಬಸ್‌ಗಳ ಸಂಖ್ಯೆ ಹೆಚ್ಚಿಸುವಂತೆ ಸಿಪಿಎಂ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಸದ್ಯ ಬಿಎಂಟಿಸಿ ಬಸ್‌ಗಳಲ್ಲಿ ಅಂತರ ನಿಯಮ ಪಾಲನೆಯಾಗುತ್ತಿಲ್ಲ. ಬಸ್‌ಗಳ ಸಂಖ್ಯೆ ಹೆಚ್ಚಿಸುವ ಮೂಲಕ ಈ ನಿಯಮ ಕಡ್ಡಾಯಗೊಳಿಸಿ ಸೋಂಕು ಹರಡುವಿವಿಕೆ ತಡೆಯಲು ಸರ್ಕಾರ ಮುಂದಾಗಬೇಕು’ ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೆಂಗಳೂರು ಉತ್ತರ ಮತ್ತು ದಕ್ಷಿಣ ಜಿಲ್ಲಾ ಸಮಿತಿಗಳು ಒತ್ತಾಯಿಸಿವೆ.

‘ನಗರದಲ್ಲಿ ಕೋವಿಡ್‌ ಪೀಡಿತರ ಸಂಖ್ಯೆ ದಿನೆ ದಿನೇ ಹೆಚ್ಚುತ್ತಿದೆ. ಇದರಿಂದ ದುಡಿಯುವ ಜನರ ಬದುಕು ಬೀದಿಗೆ ಬೀಳುವ ಅಪಾಯ ಎದುರಾಗಿದೆ. ತಮ್ಮ ನಿತ್ಯದ ಕೆಲಸಗಳಿಗಾಗಿ ಪ್ರತಿನಿತ್ಯ 40 ಲಕ್ಷಕ್ಕೂ ಅಧಿಕ ಮಂದಿ ಬಿಎಂಟಿಸಿ ಬಸ್‌ ಸೇವೆ ಅವಲಂಬಿಸಿದ್ದಾರೆ. ಬಿಎಂಟಿಸಿಯು ಬಸ್‌ಗಳಲ್ಲಿ ಸಾಮರ್ಥ್ಯದ ಶೇ 50ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಬೇಕು. ಜೊತೆಗೆ ಬಸ್‌ ಟ್ರಿಪ್‌ಗಳನ್ನು ಹೆಚ್ಚಿಸಿ ಇತರರಿಗೆ ತೊಂದರೆಯಾಗುವುದನ್ನು ತಪ್ಪಿಸಬೇಕು. ಬಸ್‌ಗಳಲ್ಲಿ ಸೋಂಕು ನಿವಾರಕ ದ್ರಾವಣವನ್ನೂ ಸಿಂಪಡಿಸಬೇಕು’ ಎಂದು ಆಗ್ರಹಿಸಿವೆ. 

‘ಕೆಲ ಮಾರ್ಗಗಳಲ್ಲಿ ಸಂಚರಿಸುವ ಬಸ್‌ಗಳು ಪ್ರಯಾಣಿಕರಿಂದ ತುಂಬಿರುತ್ತವೆ. ಶ್ರಮಿಕ ವರ್ಗದವರು ಅಂತಹ ಬಸ್‌ಗಳಲ್ಲಿ ಪ್ರಯಾಣಿಸುವುದು ಅನಿವಾರ್ಯ. ಇದರಿಂದ ಕೊರೊನಾ ಸೋಂಕು ವೇಗವಾಗಿ ಹರಡುವ ಅಪಾಯ ಎದುರಾಗಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು’ ಎಂದು ಸಮಿತಿಗಳು ಹೇಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.