ಬೆಂಗಳೂರು: ಆದಾಯ ತೆರಿಗೆ ಇಲಾಖೆಯ ದಾಳಿಗೊಳಗಾಗಿರುವ ಎಂ.ಆರ್. ಉಮೇಶ್ ಅವರನ್ನು ಮುಖ್ಯಮಂತ್ರಿಯವರ ಸಚಿವಾಲಯಕ್ಕೆ ನಿಯೋಜನೆ ಮಾಡಿದ್ದ ಆದೇಶವನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಹಿಂಪಡೆದಿದೆ.
ಬಿಎಂಟಿಸಿಯ ಪುಟ್ಟೇನಹಳ್ಳಿಯ ಡಿಪೊ ಚಾಲಕ ಕಂ. ನಿರ್ವಾಹಕ ಹುದ್ದೆಯಲ್ಲಿದ್ದ ಉಮೇಶ್ 2007ರಿಂದಲೂ ನಿಯೋಜನೆ ಮೇಲೆ ರಾಜಕಾರಣಿಗಳ ಆಪ್ತ ಸಹಾಯಕರಾಗಿದ್ದರು. ಸದ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವಾಲಯದಲ್ಲಿ ಸಿಬ್ಬಂದಿಯಾಗಿದ್ದರು.
ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಮಗ ಬಿ.ವೈ. ವಿಜಯೇಂದ್ರ ಆಪ್ತರಾಗಿದ್ದ ಉಮೇಶ್ ಮತ್ತು ಅವರ ಜತೆ ನಿಕಟ ನಂಟು ಹೊಂದಿರುವ ಗುತ್ತಿಗೆದಾರರ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದರು. ಉಮೇಶ್ ನಿಯೋಜನೆಯನ್ನು ಹಿಂಪಡೆದು ಗುರುವಾರ ಸಂಜೆಯೇ ಬಿಎಂಟಿಸಿಯ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.