ಮಂಗಳವಾರ, ಜನವರಿ 25, 2022
24 °C

ಪ್ರಚಾರದಿಂದ ದೂರ: ಬಚ್ಚೇಗೌಡ ನಡೆ ನಿಗೂಢ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ಕೋಲಾರ– ಚಿಕ್ಕಬಳ್ಳಾಪುರ ವಿಧಾನ ಪರಿಷತ್ ಕ್ಷೇತ್ರದಲ್ಲಿ ಚುನಾವಣೆ ರಂಗೇರಿದ್ದರೂ ಚಿಕ್ಕಬಳ್ಳಾಪುರ ಸಂಸದ ಬಿ.ಎನ್.ಬಚ್ಚೇಗೌಡ ಮಾತ್ರ ಇಲ್ಲಿಯವರೆಗೂ ಬಿಜೆಪಿಯ ಒಂದೇ ಒಂದು ಪ್ರಚಾರ ಸಭೆಯಲ್ಲಿಯೂ ಕಾಣಿಸಿಕೊಂಡಿಲ್ಲ!

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಕಮಲ ಅರಳಿಸಿದ ಕೀರ್ತಿ ಬಚ್ಚೇಗೌಡ ಅವರಿಗೆ ಸಲ್ಲುತ್ತದೆ. ಹೊಸಕೋಟೆಯ ಬಚ್ಚೇಗೌಡ ಅವರು ಚಿಕ್ಕಬಳ್ಳಾಪುರವಷ್ಟೇ ಅಲ್ಲ ನೆರೆಯ ಕೋಲಾರ ಜಿಲ್ಲೆಯಲ್ಲಿಯೂ ತಮ್ಮದೇ ಆದ ಪ್ರಭಾವ ಹೊಂದಿದ್ದಾರೆ. ಹೀಗಿದ್ದರೂ ಪರಿಷತ್ ಚುನಾವಣೆಯ ಪ್ರಚಾರ ಸಭೆಗಳಿಂದ ದೂರವಿರುವುದು ನಾನಾ ರೀತಿಯ ಚರ್ಚೆ ಹುಟ್ಟು ಹಾಕಿದೆ.  

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗಲೂ ಬಚ್ಚೇಗೌಡ ಕಾಣಿಸಿಕೊಳ್ಳಲಿಲ್ಲ. ಜಿಲ್ಲೆಯಲ್ಲಿ ಮಳೆಯಿಂದ ಅಪಾರ ಪ್ರಮಾಣದ ಹಾನಿ ಸಂಭವಿಸಿದ್ದರೂ ಹಾನಿಯಾದ ಪ್ರದೇಶಗಳಿಗೆ ಒಮ್ಮೆಯೂ ಭೇಟಿ ನೀಡಿಲ್ಲ.

ಗೌಡರ ಪುತ್ರ ಶರತ್ ಬಚ್ಚೇಗೌಡ ಅವರು ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿ ಈಗ ಕಾಂಗ್ರೆಸ್ ಸೇರಿದ್ದಾರೆ. ತಮ್ಮ ತಂದೆಯ ರಾಜಕೀಯ ನಿರ್ಧಾರಗಳಲ್ಲಿ ಅವರು ಪ್ರಮುಖ ಪಾತ್ರವಹಿಸುತ್ತಿದ್ದಾರೆ. 

ಚುನಾವಣೆ ಹತ್ತಿರದಲ್ಲಿದ್ದರೂ ಬಚ್ಚೇಗೌಡರ ನಡೆ ಇನ್ನೂ ನಿಗೂಢವಾಗಿದೆ. ಅವರು ಯಾರನ್ನು ಬೆಂಬಲಿಸುತ್ತಾರೆ ಎಂಬ ಬಗ್ಗೆ ಬಿಜೆಪಿ ಕಾರ್ಯಕರ್ತರಲ್ಲೇ ಗೊಂದಲ ಕಾಣುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು