ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗ ಸೃಷ್ಟಿಸುವತ್ತ ಚಿತ್ತ ಹರಿಸಿ: ಎಂ.ಟಿ. ರಂಗಾರೆಡ್ಡಿ

Last Updated 16 ಡಿಸೆಂಬರ್ 2021, 5:08 IST
ಅಕ್ಷರ ಗಾತ್ರ

ಬೆಂಗಳೂರು: ‘ಪದವಿ ಪೂರ್ಣಗೊಳಿಸಿದ ಬಳಿಕ ಉದ್ಯೋಗಕ್ಕಾಗಿ ಅಲೆಯದೆ ಸ್ವಂತ ಉದ್ದಿಮೆ ಸ್ಥಾಪಿಸಿ ಇತರರಿಗೆ ಉದ್ಯೋಗ ಕಲ್ಪಿಸುವತ್ತ ಚಿತ್ತ ಹರಿಸಿ’ ಎಂದು ಎಂಜಿನಿಯರ್‌ಗಳ ಸಂಸ್ಥೆಯ ಕರ್ನಾಟಕ ಕೇಂದ್ರದ ಕಾರ್ಯದರ್ಶಿ ಎಂಟಿ ರಂಗಾರೆಡ್ಡಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಎಂಜಿನಿಯರ್‌ಗಳ ಸಂಸ್ಥೆಯುಬಿಎನ್‌ಎಂ ತಾಂತ್ರಿಕ ವಿದ್ಯಾಲಯದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ‘ಇಂಧನ ಸಂರಕ್ಷಣೆ ಜಾಗೃತಿ’ ಕುರಿತ ವಿಚಾರ ಸಂಕಿರಣ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಂಗಳವಾರ ಮಾತನಾಡಿದರು.

‘ಈಗಪ್ರತಿ ವರ್ಷ 10 ಲಕ್ಷದಿಂದ 12 ಲಕ್ಷ ಮಂದಿ ಎಂಜಿನಿಯರಿಂಗ್ ಪದವಿ ಪೂರ್ಣಗೊಳಿಸುತ್ತಿದ್ದಾರೆ. ಇವರಲ್ಲಿ ಬಹುತೇಕರು ನಿರುದ್ಯೋಗಿಗಳಾಗುತ್ತಿದ್ದಾರೆ. ಎಂಜಿನಿಯರಿಂಗ್‌ ಪದವಿ ಪಡೆದವರನ್ನು ಜನ ಕೀಳಾಗಿ ಕಾಣುತ್ತಿರುವುದನ್ನು ನೋಡಿದಾಗ ತುಂಬಾ ಬೇಸರವಾಗುತ್ತದೆ’ ಎಂದರು.

‘ಅತಿ ಹೆಚ್ಚು ನವೋದ್ಯಮಗಳನ್ನು ಹೊಂದಿರುವ ನಗರಗಳಲ್ಲಿಬೆಂಗಳೂರು ಮುಂಚೂಣಿಯಲ್ಲಿದೆ. ಈ ಕ್ಷೇತ್ರದಲ್ಲಿ ಯುವ ಪೀಳಿಗೆಗೆ ಹೇರಳ ಅವಕಾಶಗಳಿವೆ. ನವೋದ್ಯಮಿಗಳಿಗೆ ಪ್ರೋತ್ಸಾಹವೂ ಸಿಗುತ್ತಿದೆ. ಅದನ್ನು ಸದುಪಯೋಗಪಡಿಸಿಕೊಂಡು ವಿಭಿನ್ನವಾದುದ್ದನ್ನು ಸಾಧಿಸಬೇಕು’ ಎಂದು ಸಲಹೆ ನೀಡಿದರು.

ಬಿಎನ್‌ಎಂ ಶಿಕ್ಷಣ ಸಮೂಹಗಳ ಕಾರ್ಯದರ್ಶಿ ನಾರಾಯಣ ರಾವ್‌ ಆರ್‌.ಮಾನೆ, ‘ಅಭಿವೃದ್ಧಿಯ ನೆಪದಲ್ಲಿ ಪರಿಸರಕ್ಕೆ ಧಕ್ಕೆ ಉಂಟು ಮಾಡಲಾಗುತ್ತಿದೆ.ಪರಿಸರಕ್ಕೆ ಮಾರಕವಾಗುವಂತಹ ಯೋಜನೆಗಳನ್ನು ಕೈಗೊಳ್ಳಬಾರದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT