2ಎ ಮೀಸಲಾತಿ ಬಗ್ಗೆ ಬೊಮ್ಮಾಯಿಗೆ ಅಸ್ಪಷ್ಟ ನಿಲುವು: ಮೃತ್ಯುಂಜಯ ಸ್ವಾಮೀಜಿ ಬೇಸರ

ರಟ್ಟೀಹಳ್ಳಿ (ಹಾವೇರಿ ಜಿಲ್ಲೆ): ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವ ಬಗ್ಗೆ ಸ್ಪಷ್ಟ ನಿಲುವು ತೋರುತ್ತಿಲ್ಲ. ಸಮಾಜದ ವಿಷಯವಾಗಿ ಅವರು ಮೌನವಹಿಸಿದ್ದಾರೆ’ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದರು.
ಸೋಮವಾರ ಪಟ್ಟಣದಲ್ಲಿ ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಘೋಷಿಸುವಂತೆ ಆಗ್ರಹಿಸಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಮಾತನಾಡಿದರು.
‘ಮೀಸಲಾತಿ ಕುರಿತ ಸಭೆಯಲ್ಲಿ ಸಮಾಜದ ಮೀಸಲಾತಿ ಹೋರಾಟಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿ, ಬಜೆಟ್ ಒಳಗೆ ಸಮಾಜಕ್ಕೆ ಮೀಸಲಾತಿಯನ್ನು ನೀಡುವುದಾಗಿ ಬೊಮ್ಮಾಯಿ ಹೇಳಿದ್ದರು. ಬಜೆಟ್ ಅಧಿವೇಶನ ಮುಕ್ತಾಯವಾಗುವುದರೊಳಗೆ ಹಿಂದುಳಿದ ವರ್ಗಗಳ ಆಯೋಗದಿಂದ ಮಾಹಿತಿ ಪಡೆದುಕೊಂಡು 2ಎ ಮೀಸಲಾತಿ ಘೋಷಣೆ ಮಾಡಬೇಕು’ ಎಂದು ಆಗ್ರಹಿಸಿದರು.
‘ಎರಡು ವರ್ಷಗಳಿಂದ ನಿರಂತರವಾಗಿ ಮೀಸಲಾತಿ ಹೋರಾಟ ನಡೆಸುತ್ತಿದ್ದರೂ, ಸರ್ಕಾರ ನಮ್ಮ ಸಮಾಜಕ್ಕೆ 2ಎ ಮೀಸಲಾತಿ ಘೋಷಣೆಯಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ’ ಎಂದು ದೂರಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.