ಶುಕ್ರವಾರ, ಫೆಬ್ರವರಿ 3, 2023
25 °C

ಬೆಳಗಾವಿ ಗಡಿ ವಿವಾದ: ವಕೀಲರು, ನಡ್ಡಾ ಭೇಟಿಗೆ ಸದ್ಯದಲ್ಲೇ ದೆಹಲಿಗೆ: ಬೊಮ್ಮಾಯಿ

ಪಿಟಿಐ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಭೇಟಿಗೆ ಸದ್ಯದಲ್ಲೇ ದೆಹಲಿಗೆ ತೆರಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಂಗಳವಾರ ಅವರು ರಾಷ್ಟ್ರ ರಾಜಧಾನಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ.

ಇದೇವೇಳೆ, ಸುಪ್ರೀಂ ಕೋರ್ಟ್ ವಕೀಲರನ್ನು ಭೇಟಿಯಾಗಿ ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಚರ್ಚಿಸುವುದಾಗಿ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಹೀಗಾಗಿ, ಗುಜರಾತ್ ಚುನಾವಣೆ ಬಳಿಕ ರಾಜ್ಯದ ಸಚಿವ ಸಂಪುಟ ವಿಸ್ತರಣೆಗೆ ಚಾಲನೆ ಸಿಗುವ ಸಾಧ್ಯತೆ ಇದೆ.

‘ನಾನು ದೆಹಲಿಗೆ ಹೋಗುತ್ತಿದ್ದೇನೆ. ಅಲ್ಲಿ ಪಕ್ಷದ ಅಧ್ಯಕ್ಷ ನಡ್ಡಾ ಅವರನ್ನು ಭೇಟಿಮಾಡಬೇಕೆಂದುಕೊಂಡಿದ್ದೇನೆ. ನನಗೆ ಇನ್ನೂ ಅವರ ಭೇಟಿಗೆ ಅನುಮತಿ ಸಿಕ್ಕಿಲ್ಲ. ಅನುಮತಿ ಸಿಗುವ ಭರವಸೆ ಇದೆ’ಎಂದು ಬೊಮ್ಮಾಯಿ ಹೇಳಿದ್ದಾರೆ.

ಈ ಮಧ್ಯೆ, ಹಿರಿಯ ವಕೀಲ ಮುಕುಲ್ ರೋಹಟಗಿ ಅವರನ್ನು ಭೇಟಿಯಾಗಿ ಬೆಳಗಾವಿ ಗಡಿ ವಿವಾದದ ಕಾನೂನು ಹೋರಾಟದ ಬಗ್ಗೆ ಚರ್ಚೆ ನಡೆಸುಸುತ್ತೇನೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪೀಯೂಷ್ ಗೋಯಲ್ ಅವರನ್ನೂ ಭೇಟಿ ಮಾಡುವುದಾಗಿ ಹೇಳಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಸಂಪುಟದಲ್ಲಿ ಖಾಲಿ ಇರುವ 6 ಸ್ಗಾನಗಳನ್ನು ತುಂಬುವ ಮೂಲಕ ಹೊಸ ಮುಖಗಳಿಗೆ ಅವಕಾಶ ನೀಡುವ ಸಾಧ್ಯತೆ ಇದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು