ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿದ್ವಾಯಿ: ಅಸ್ಥಿಮಜ್ಜೆ ಕಸಿಗೆ 15ಕ್ಕೆ ಚಾಲನೆ

Last Updated 14 ಫೆಬ್ರುವರಿ 2022, 16:59 IST
ಅಕ್ಷರ ಗಾತ್ರ

ಬೆಂಗಳೂರು: ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿಅಸ್ಥಿಮಜ್ಜೆ (ಬೋನ್‌ ಮ್ಯಾರೊ) ಕಸಿ ಚಿಕಿತ್ಸೆಗೆ ಮಂಗಳವಾರ (ಫೆ.15) ಚಾಲನೆ ದೊರೆಯಲಿದೆ.

ಸಂಸ್ಥೆಯ ಆವರಣದಲ್ಲಿ ಈಗಾಗಲೇ ಅಸ್ಥಿಮಜ್ಜೆ ಕಸಿ ಘಟಕ ನಿರ್ಮಾಣವಾಗಿದೆ.ಖಾಸಗಿ ಆಸ್ಪತ್ರೆಗಳಲ್ಲಿ ₹ 30 ಲಕ್ಷದಿಂದ ₹ 50 ಲಕ್ಷ ವೆಚ್ಚವಾಗುವ ಕಸಿಯನ್ನು ಸಂಸ್ಥೆಯಲ್ಲಿ ಬಡತನ ರೇಖೆಗಿಂತ ಕೆಳಗಿನ (ಬಿಪಿಎಲ್) ಕುಟುಂಬದವರಿಗೆ ಬಹುತೇಕ ಉಚಿತವಾಗಿ ಒದಗಿಸಲಾಗುತ್ತದೆ.

ಸಂಸ್ಥೆಯ ಆವರಣದಲ್ಲಿ 42 ಹಾಸಿಗೆಗಳ ಸಾಮರ್ಥ್ಯದ ವೈದ್ಯಕೀಯ ಐಸಿಯು ಘಟಕ ನಿರ್ಮಾಣವಾಗಲಿದ್ದು, ಇದರ ಭೂಮಿ ಪೂಜೆ ಮಂಗಳವಾರ ನಡೆಯಲಿದೆ. ₹ 4 ಕೋಟಿ ವೆಚ್ಚದಲ್ಲಿ ಇದನ್ನು ರಾಜಶೇಖರ್ ಎಂಬುವರು ನಿರ್ಮಿಸಿಕೊಡುತ್ತಿದ್ದಾರೆ.

‘ರೋಗಿಗಳನ್ನು ರಕ್ತದ ಕ್ಯಾನ್ಸರ್‌ನಿಂದ ಮುಕ್ತ ಮಾಡಲು ಅಸ್ಥಿಮಜ್ಜೆ ಕಸಿ ಸಹಾಯಕ. ಆದರೆ, ಸಂಕೀರ್ಣ ಚಿಕಿತ್ಸೆಗೆ ರೋಗಿಗಳು ಖಾಸಗಿ ಆಸ್ಪತ್ರೆಗಳನ್ನೇ ಹೆಚ್ಚಾಗಿ ಅವಲಂಬಿಸಬೇಕಾಗಿದೆ. ಈಗ ಸಂಸ್ಥೆಯಲ್ಲಿಯೇ ಈ ಕಸಿಯನ್ನು ಒದಗಿಸಲಾಗುತ್ತಿದೆ. ಅಂತರರಾಷ್ಟ್ರೀಯ ಮಕ್ಕಳ ಕ್ಯಾನ್ಸರ್ ದಿನದ ಪ್ರಯುಕ್ತ ಇದಕ್ಕೆ ಚಾಲನೆ ನೀಡಲಾಗುತ್ತಿದೆ’ ಎಂದು ಸಂಸ್ಥೆ ನಿರ್ದೇಶಕ ಡಾ.ಸಿ. ರಾಮಚಂದ್ರ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT