ಬಾಲಕನ ಅಪಹರಣ: ₹ 10 ಕೋಟಿ ಬೇಡಿಕೆ

ಉಜಿರೆ: ಉಜಿರೆಯಲ್ಲಿ ನಡೆದ ಎಂಟು ವರ್ಷ ಪ್ರಾಯದ ಬಾಲಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಶುಕ್ರವಾರ ಬಾಲಕನ ಮನೆಗೆ ಭೇಟಿ ನೀಡಿ ಮಾಹಿತಿ ಕಲೆಹಾಕಿದರು.
ಪ್ರಕರಣ ಭೇದಿಸಲು ನಾಲ್ಕು ತಂಡಗಳನ್ನು ರಚಿಸಲಾಗಿದೆ. ಅಪಹರಣಕಾರರು ಗುರುವಾರ ₹ 17 ಕೋಟಿ ಬೇಡಿಕೆ ಇಟ್ಟಿದ್ದರು. ಶುಕ್ರವಾರ ಇದನ್ನು ₹ 10 ಕೋಟಿಗೆ ಇಳಿಕೆ ಮಾಡಿದ್ದು, ಬಿಟ್ ಕಾಯಿನ್ ಮೂಲಕ ಪಾವತಿಸುವಂತೆ ಬೇಡಿಕೆ ಇಟ್ಟಿದ್ದಾರೆ. ಈ ಸಂಬಂಧ ಕೂಲಂಕಷ ತನಿಖೆ ನಡೆಸಲಾಗುತ್ತಿದೆ. ಆರೋಪಿಗಳು ಬಾಲಕನ ಮನೆಯವರ ಪರಿಚಯದವರಾಗಿರಬಹುದು ಎಂದು ಶಂಕಿಸಲಾಗಿದೆ ಎಂದು ಲಕ್ಷ್ಮೀಪ್ರಸಾದ್ ಪ್ರತಿಕ್ರಿಯಿಸಿದರು.
ಉಜಿರೆ ರಥಬೀದಿಯ ನಿವಾಸಿ ಎ.ಕೆ.ಶಿವನ್ ಅವರ ಮೊಮ್ಮಗ 8 ವರ್ಷದ ಅನುಭವ್‌ನನ್ನು ಗುರುವಾರ ಸಂಜೆ ಕಾರಿನಲ್ಲಿ ಬಂದವರು ಅಪಹರಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.