ಗುರುವಾರ , ಡಿಸೆಂಬರ್ 1, 2022
25 °C

ಬಾಲಕನಿಗೆ ಬೆತ್ತಲೆ ಪೂಜೆ: ಮೂವರು ಆರೋಪಿಗಳ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ‘ಅಪ್ಪನ ಸಾಲ ತೀರಬೇಕಾದರೆ ನೀನು ಬೆತ್ತಲೆ ಪೂಜೆ ಮಾಡಬೇಕು.’ ಎಂದು ಬಾಲಕನೊಬ್ಬನನ್ನು ನಂಬಿಸಿ ಆತನಿಗೆ ಬೆತ್ತಲೆ ಪೂಜೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕೊಪ್ಪಳ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಘಟನೆ ಕುರಿತು ಭಾನುವಾರ ರಾತ್ರಿ ಗ್ರಾಮೀಣ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಆರೋಪಿಗಳ ಪತ್ತೆಗೆ ಎರಡು ತಂಡಗಳನ್ನು ರಚಿಸಲಾಗಿತ್ತು. ಆರೋಪಿಗಳಾದ ಕೊಪ್ಪಳ ತಾಲ್ಲೂಕಿನ ಹಾಸಗಲ್‌ ಗ್ರಾಮದ ಶರಣಪ್ಪ ತಳವಾರ, ಗಂಗನಾಳ ಗ್ರಾಮದ ವಿರುಪನಗೌಡ ಮತ್ತು ಮೆತಗಲ್‌ ಗ್ರಾಮದ ಶರಣಪ್ಪ ಓಜನಹಳ್ಳಿ ಎಂಬುವವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಕೊಪ್ಪಳ: ತಂದೆ ಸಾಲ ತೀರಲು ಮಗನಿಗೆ ಬೆತ್ತಲೆ ಪೂಜೆ!

’ಘಟನೆ ಕುರಿತು ಪ್ರಕರಣ ದಾಖಲಾದ 24 ಗಂಟೆಗಳಲ್ಲಿಯೇ ಆರೋಪಿಗಳನ್ನು ಬಂಧಿಸಲಾಗಿದೆ. ಮುಂದಿನ ತನಿಖೆಯನ್ನು ಗ್ರಾಮೀಣ ವೃತ್ತದ ಸಿಪಿಐಗೆ ವಹಿಸಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಶು ಗಿರಿ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.