ಸೋಮವಾರ, ಏಪ್ರಿಲ್ 12, 2021
29 °C
Bpac alumni association

‘ಬಿ ಕ್ಲಿಪ್‌ ಅಲ್ಯುಮ್ನಿ ಸಂಸ್ಥೆಯಿಂದ ‘100 ಸಾಧಕಿಯರಿಗೆ ಪ್ರಶಸ್ತಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಬಿ ಕ್ಲಿಪ್‌ ಅಲ್ಯುಮ್ನಿ ಸಂಸ್ಥೆಯು ಅಂತರರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿರುವ 100 ಮಹಿಳೆಯರಿಗೆ ‘ಬೆಂಗಳೂರು ವಿಮೆನ್‌ ಅಚೀವರ್ಸ್‌’ ಪ್ರಶಸ್ತಿ ನೀಡಲು ನಿರ್ಧರಿಸಿದೆ. ಈ ಕಾರ್ಯಕ್ರಮ ಇದೇ 20ರಂದು ವಾಸವಿ ಆಡಿಟೋರಿಯಂನಲ್ಲಿ ನಡೆಯಲಿದೆ’ ಎಂದು ಕವಿತಾ ರೆಡ್ಡಿ ತಿಳಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ವಾರ್ಡ್‌ ಮಟ್ಟದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಮಹಿಳೆಯರನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಈ ಪ್ರಶಸ್ತಿ ನೀಡಲಾಗುತ್ತಿದೆ. ವಾರ್ಡ್‌ಗಳಲ್ಲಿರುವ ಬಿ ಕ್ಲಿಪ್‌ ಪ್ರತಿನಿಧಿಗಳು ಒಟ್ಟು 120 ಸಾಧಕಿಯರನ್ನು ನಾಮನಿರ್ದೇಶನ ಮಾಡಿದ್ದರು. ಈ ಪೈಕಿ ಆಯ್ಕೆ ಸಮಿತಿಯು 100 ಮಂದಿಯ ಹೆಸರು ಅಂತಿಮಗೊಳಿಸಿದೆ’ ಎಂದರು.

ಕಾವೇರಿ ಕೇದಾರನಾಥ್‌ ‘ಶಿಕ್ಷಣ, ಕ್ರೀಡೆ, ಆರೋಗ್ಯ, ಸಾಮಾಜಿಕ ಸೇವೆ, ಪರಿಸರ, ಮಹಿಳಾ ಸಬಲೀಕರಣ, ಕೋವಿಡ್‌ ವಾರಿಯರ್ಸ್‌ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡಿರುವವರನ್ನು ಪ್ರಶಸ್ತಿಗೆ ಆಯ್ಕೆಮಾಡಲಾಗಿದೆ’ ಎಂದು ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.