ಬೆಂಗಳೂರು: ಕೋವಿಡ್ನಿಂದ ಮೃತಪಟ್ಟಬಡ ಸದಸ್ಯನ ಕುಟುಂಬದವರಿಗೆ ತಲಾ ₹1ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದ ಅವರು, ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುವುದು ಎಂದರು.

ಬಿಪಿಎಲ್ ಪಡಿತರ ಚೀಟಿ ಹೊಂದಿದವರಿಗೆ ಮಾತ್ರ ಇದು ಅನ್ವಯವಾಗುತ್ತದೆ. ಅದರಲ್ಲೂ ವಯಸ್ಕರು ಮೃತಪಟ್ಟಿದ್ದರೆ ಅವರ ಹೆಸರಿನಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುತ್ತದೆ. ಇದಕ್ಕಾಗಿ ಸರ್ಕಾರಕ್ಕೆ ₹250 ರಿಂದ ₹300 ಕೋಟಿ ಬೇಕಾಗುತ್ತದೆ ಎಂದು ಯಡಿಯೂರಪ್ಪ ತಿಳಿಸಿದರು.

ಕೋವಿಡ್ನಿಂದಾಗಿ ಸಾಕಷ್ಟು ಕುಟುಂಬಗಳಲ್ಲಿ ದುಡಿಯುವ ವ್ಯಕ್ತಿಗಳೇ ಮೃತಪಟ್ಟಿದ್ದಾರೆ. ಇದರಿಂದ ಕುಟುಂಬಗಳು ಸಂಕಷ್ಟಕ್ಕೆ ತುತ್ತಾಗಿವೆ. ಅವರ ನೆರವಿಗಾಗಿ ಈ ಪರಿಹಾರ ನೀಡಲಾಗುತ್ತಿದೆ. ಈ ಸಂಬಂಧ ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ. ದೇಶದಲ್ಲಿ ಮೊದಲ ಬಾರಿಗೆ ಈ ರೀತಿಯ ಪರಿಹಾರ ನೀಡಲಾಗುತ್ತಿದೆ. ಬೇರೆ ಯಾವುದೇ ರಾಜ್ಯಗಳಲ್ಲೂ ಕೋವಿಡ್ನಿಂದ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ನೀಡಿಲ್ಲ ಎಂದರು.

ರಾಜ್ಯದಲ್ಲಿ ಹಣಕಾಸು ಸ್ಥಿತಿ ಉತ್ತಮವಾಗಿರುವುದರಿಂದಲೇ ಪರಿಹಾರ ನೀಡಲು ಸಾಧ್ಯವಾಗಿದೆ ಎಂದು ಯಡಿಯೂರಪ್ಪ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.