ಶನಿವಾರ, ಅಕ್ಟೋಬರ್ 1, 2022
20 °C

ಬ್ರಾಹ್ಮಣ ಕಲ್ಯಾಣ ನಿಗಮ ಸ್ಥಾಪನೆಗೆ ಬ್ರಾಹ್ಮಣ ಮಹಾಸಭಾದಿಂದ ಕೇಂದ್ರಕ್ಕೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೇಂದ್ರ ಸರ್ಕಾರವು ರಾಷ್ಟ್ರೀಯ ಬ್ರಾಹ್ಮಣ ಕಲ್ಯಾಣ ನಿಗಮವನ್ನು ಸ್ಥಾಪಿಸಬೇಕು ಎಂದು ಅಖಿಲ ಭಾರತೀಯ ಬ್ರಾಹ್ಮಣ ಮಹಾಸಭಾ ಆಗ್ರಹಿಸಿದೆ.

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ವೀರೇಂದ್ರ ಕುಮಾರ್‌ ಹಾಗೂ ಇಲಾಖೆಯ ರಾಜ್ಯ ಸಚಿವ ರಾಮದಾಸ ಅಥಾವಳೆ ಅವರನ್ನು ಬುಧವಾರ ಭೇಟಿ ಮಾಡಿದ ಮಹಾಸಭಾದ ಪದಾಧಿಕಾರಿಗಳು ಮನವಿ ಸಲ್ಲಿಸಿದರು. 

‘ದೇಶದಲ್ಲಿ ಬ್ರಾಹ್ಮಣರ ಸಂಖ್ಯೆ ಶೇ 11ರಷ್ಟು ಇದೆ. ಬ್ರಾಹ್ಮಣರಲ್ಲಿ ಶೇ 30ರಷ್ಟು ಮಂದಿ ಬಡವರು. ಶೇ 40ರಷ್ಟು ಮಂದಿ ಮಧ್ಯಮ ವರಮಾನ ಗುಂಪಿಗೆ ಸೇರಿದವರು. ಶೇ 10ರಷ್ಟು ಶ್ರೀಮಂತರು ಇದ್ದಾರೆ. ಶೇ 30ರಷ್ಟು ಇರುವ ಬಡವರ ನೆರವಿಗೆ ಕೇಂದ್ರ ಸರ್ಕಾರ ಧಾವಿಸಬೇಕು. ಜತೆಗೆ, ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. 

ನಿಯೋಗದಲ್ಲಿ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಡಾ.ಗೋವಿಂದ ಕುಲಕರ್ಣಿ, ಬ್ರಹ್ಮ ಉದ್ಯೋಗ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ತ್ರಿವಿಕ್ರಮ ಜೋಷಿ ಮತ್ತಿತರರು ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು