ಗುರುವಾರ , ಮಾರ್ಚ್ 23, 2023
23 °C
ಮಿದುಳು ನಿಷ್ಕ್ರಿಯಗೊಂಡಿದ್ದ ಯುವತಿಯ ಅಂಗಾಂಗಳು ದಾನ: ಜಿರೋ ಟ್ರಾಫಿಕ್‌ನಲ್ಲಿ ಸಾಗಣೆ

ಬೆಳಗಾವಿ ಯುವಕನಿಗೆ ಜಿರೋ ಟ್ರಾಫಿಕ್‌ನಲ್ಲಿ ಸಾಗಿತು ಧಾರವಾಡ ಯುವತಿಯ ಹೃದಯ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಧಾರವಾಡ: ಮೆದುಳು ನಿಷ್ಕ್ರಿಯಗೊಂಡ ಯುವತಿಯ ಅಂಗಾಂಗಳು ನಾಲ್ಕು ಜನರಿಗೆ ಜೀವದಾನ ಮಾಡಿವೆ. ಇದಕ್ಕಾಗಿ ಝೀರೊ ಟ್ರಾಫಿಕ್ ಮೂಲಕ ಇಲ್ಲಿನ ಎಸ್‌ಡಿಎಂಯಿಂದ ಅಂಗಾಂಗಗಳನ್ನು ಸಾಗಿಸಲಾಯಿತು.

17 ವರ್ಷದ ಬಾಲಕಿ ಇಲ್ಲಿನ ಎಸ್‌ಡಿಎಂ ಆಸ್ಪತ್ರೆಯಲ್ಲಿ ಕಳೆದ ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದ ಮೆದುಳು ಮೆದುಳು ನಿಷ್ಕ್ರಿಯಗೊಂಡಿದೆ ಎಂದು ವೈದ್ಯರು ಘೋಷಿಸಿದರು. ಹೀಗಾಗಿ ಆಕೆಯ ಹೃದಯ ಮತ್ತು ಯಕೃತ್‌ ಅನ್ನು ದಾನ ಮಾಡಲು ಪಾಲಕರು ಒಪ್ಪಿಗೆ ಸೂಚಿಸಿದ್ದರು. ಆದರೆ ಗುರುತು ಬಹಿರಂಗಪಡಿಸಲು ನಿರಾಕರಿಸಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಹೃದಯವನ್ನು ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವಕನಿಗೆ ನೀಡಲು ಇಲ್ಲಿಂದ ಆಂಬುಲೆನ್ಸ್ ಮೂಲಕ ಕೊಂಡೊಯ್ಯಲಾಯಿತು. ಹಾಗೆಯೇ ಬೆಂಗಳೂರಿನ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಗೆ ಯಕೃತ್ ಕಸಿ ಮಾಡಲಾಗುತ್ತಿದ್ದು, ಅದಕ್ಕಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣವರೆಗೆ ಝೀರೊ ಟ್ರಾಫಿಕ್‌ ಮೂಲಕ ಆಂಬುಲೆನ್ಸ್‌ಗಳು ತೆರಳಿದವು.

ಎರಡು ಮೂತ್ರಪಿಂಡಗಳಲ್ಲಿ ಒಂದು ಎಸ್‌ಡಿಎಂ ಆಸ್ಪತ್ರೆ ಹಾಗೂ ಹುಬ್ಬಳ್ಳಿಯ ತತ್ವದರ್ಶಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಬ್ಬರಿಗೆ ಕಸಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

 

ಆಸ್ಪತ್ರೆಯಿಂದ ಸೋಮವಾರ ಸಂಜೆ ಸುಮಾರು 4.30ರ ಹೊತ್ತಿಗೆ ಹೊರಟ ಆಂಬುಲೆನ್ಸ್‌ಗಳು ಸಾಗುವ ಮಾರ್ಗದಲ್ಲಿ ಪೊಲೀಸರು ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು