₹12 ಕೋಟಿ ಲಂಚ ಆರೋಪ: ಯಡಿಯೂರಪ್ಪ ವಿರುದ್ಧದ ಖಾಸಗಿ ದೂರು ವಜಾ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಖಾಸಗಿ ದೂರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ ವಜಾಗೊಳಿಸಿದೆ.
ಖಾಸಗಿ ಕಂಪನಿಯೊಂದರಿಂದ ₹12 ಕೋಟಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ಯಡಿಯೂರಪ್ಪ, ಪುತ್ರ ವಿಜಯೇಂದ್ರ, ಅಳಿಯ ಸಂಜಯ್ ಸೇರಿ 9 ಜನರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ದೂರು ದಾಖಲಿಸಿದ್ದರು.
ವಿಚಾರಣೆ ನಡೆಸಿದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಯಂತ್ ಕುಮಾರ್ ಅವರು ಕಾಯ್ದಿರಿಸಿದ್ದ ಆದೇಶವನ್ನು ಗುರುವಾರ ಪ್ರಕಟಿಸಿದರು.
ಅಶ್ವಿನಿ ವೈಷ್ಣವ್ ಪ್ರತಿಭಾನ್ವಿತರಾಗಿದ್ದರು: ನೂತನ ರೈಲ್ವೆ ಸಚಿವರ ಕಾಲೇಜು ಸಹಪಾಠಿ
ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ರಾಜ್ಯಪಾಲರಿಗೂ ಅಬ್ರಾಹಂ ಮನವಿ ಸಲ್ಲಿಸಿದ್ದರು. ಅನುಮತಿ ನೀಡಲು ರಾಜ್ಯಪಾಲರು ನಿರಾಕರಿಸಿದ್ದರು. ಬಳಿಕ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.