ಸೋಮವಾರ, ಅಕ್ಟೋಬರ್ 25, 2021
25 °C

ಪರಿಹಾರದ ಚೆಕ್ ವಿತರಿಸಲು ₹2 ಲಕ್ಷ ಲಂಚ: ಕೆಐಎಡಿಬಿ ವ್ಯವಸ್ಥಾಪಕ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸರ್ಕಾರದ ಯೋಜನೆಯೊಂದಕ್ಕೆ ಸ್ವಾಧೀನಪಡಿಸಿಕೊಂಡಿರುವ ಜಮೀನಿನ ಮಾಲೀಕರಿಗೆ ಪರಿಹಾರದ ಚೆಕ್ ವಿತರಿಸಲು ₹2 ಲಕ್ಷ ಲಂಚ ಪಡೆಯುತ್ತಿದ್ದ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ವಿಶೇಷ ಭೂಸ್ವಾಧೀನಾಧಿಕಾರಿ ಕಚೇರಿ ವ್ಯವಸ್ಥಾಪಕನನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮಂಗಳವಾರ ಬಂಧಿಸಿದೆ.

ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ- 1 ಕಚೇರಿಯ ವ್ಯವಸ್ಥಾಪಕ ದಾಸೇಗೌಡ ಬಂಧಿತ ಅಧಿಕಾರಿ. ವಿಶೇಷ ಭೂಸ್ವಾಧೀನಾಧಿಕಾರಿ- 1 ತೇಜಸ್ ಪರವಾಗಿ ಲಂಚ ಪಡೆದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

'ಚಿಂತಾಮಣಿ ತಾಲ್ಲೂಕಿನ ಮಲ್ಕಾಪುರ ಗ್ರಾಮದಲ್ಲಿ ಕೆಐಎಡಿಬಿ ಸ್ವಾಧೀನಪಡಿಸಿಕೊಂಡಿರುವ ಜಮೀನಿನ ಮಾಲೀಕರಿಗೆ ಪರಿಹಾರ ನೀಡಬೇಕಿತ್ತು. ಜಮೀನಿನ ಮಾಲೀಕರು ಪರಿಹಾರ ಕೋರಿ ಅರ್ಜಿ ಸಲ್ಲಿಸಿದ್ದರು. ತೇಜಸ್ ₹ 13 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಡು, ₹10.5 ಲಕ್ಷ ಪಡೆದಿದ್ದಾರೆ ಎಂದು ಜಮೀನು ಮಾಲೀಕರು ಎಸಿಬಿ ಬೆಂಗಳೂರು ನಗರ ಘಟಕಕ್ಕೆ ದೂರು ನೀಡಿದ್ದರು. ಅದನ್ನು ಆಧರಿಸಿ ಪ್ರಕರಣ ದಾಖಲಿಸಲಾಗಿತ್ತು' ಎಂದು ಎಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅರಮನೆ ರಸ್ತೆಯಲ್ಲಿರುವ ಕೆಐಎಡಿಬಿ ಕಚೇರಿಯಲ್ಲಿ ಮಂಗಳವಾರ ದಾಸೇಗೌಡ ₹ 2 ಲಕ್ಷ ಪಡೆಯುತ್ತಿದ್ದಾಗ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು