ಮಂಗಳವಾರ, ಜೂನ್ 28, 2022
22 °C

ಬಿ.ಆರ್.ಲಕ್ಷ್ಮಣ್‌ರಾವ್‌ಗೆ ಸಾಹಿತ್ಯ ಕಲ್ಪತರು ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ತಿಪಟೂರಿನ ಬಯಲುಸೀಮೆ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಘವು ಕವಿ ಬಿ.ಆರ್.ಲಕ್ಷ್ಮಣ್‌ರಾವ್ ಅವರನ್ನು ಪ್ರಸಕ್ತ ಸಾಲಿನ ‘ಸಾಹಿತ್ಯ ಕಲ್ಪತರು’ ಪ್ರಶಸ್ತಿಗೆ ಆಯ್ಕೆ ಮಾಡಿದೆ.

2022ನೇ ಸಾಲಿನಿಂದ ಹಿರಿಯ ಲೇಖಕರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲು ನಿರ್ಧರಿಸಿದ್ದು, ಮೊದಲ ಪ್ರಶಸ್ತಿಯನ್ನು ಬಿ.ಆರ್.ಲಕ್ಷ್ಮಣ್‌ರಾವ್ ಅವರಿಗೆ ನೀಡಲಾಗುತ್ತಿದೆ. ಪ್ರಶಸ್ತಿಯು ₹10 ಸಾವಿರ ನಗದು, ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

ತಿಪಟೂರು ನಗರದ ಸತ್ಯಗಣಪತಿ ಅಮೃತ ಮಹೋತ್ಸವ ಭವನದಲ್ಲಿ ಜೂನ್ 4ರಂದು ನಡೆಯುವ ಮಕ್ಕಳ ಭಾವಗೀತೆಗಳ ಗಾಯನ ಹಾಗೂ ಸಾಧಕರಿಗೆ ಅಭಿನಂದನಾ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನಮಾಡಿ ಗೌರವಿಸಲಾಗುತ್ತದೆ ಎಂದು ಸಂಘದ ಅಧ್ಯಕ್ಷ ಎಚ್.ಸಿ.ನಾಗರಾಜ್, ಪ್ರಧಾನ ಕಾರ್ಯದರ್ಶಿ ಎನ್.ಬಾನು ಪ್ರಶಾಂತ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು