ಶನಿವಾರ, ಮೇ 15, 2021
24 °C

ರಾಜಕೀಯ ಉಳಿವಿಗಾಗಿ ಕಾಂಗ್ರೆಸ್‌ನಿಂದ ಹೊಲಸು ರಾಜಕಾರಣ: ಬಿಜೆಪಿ ವಾಗ್ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಾಂಗ್ರೆಸ್ ತನ್ನ ರಾಜಕೀಯ ಉಳಿವಿಗಾಗಿ ಹೊಲಸು ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ವಿರುದ್ಧ ಬಿಜೆಪಿ ಈ ಟೀಕೆ ಮಾಡಿದೆ.

‘ಮುಖ್ಯಮಂತ್ರಿ ಯಡಿಯೂರಪ್ಪನವರು ನನ್ನ ಇಲಾಖೆಯಲ್ಲಿ ಅನಗತ್ಯವಾಗಿ ಹಸ್ತಕ್ಷೇಪ ಮಾಡುತ್ತಿದ್ದಾರೆ’ ಎಂದು ಆಕ್ಷೇಪಿಸಿ ಸಚಿವ ಈಶ್ವರಪ್ಪ ಅವರು ರಾಜ್ಯಪಾಲ ವಜುಭಾಯಿ ವಾಲಾ ಮತ್ತು ಬಿಜೆಪಿ ವರಿಷ್ಠರಿಗೆ ಪತ್ರ ಬರೆದಿರುವುದನ್ನು ಉಲ್ಲೇಖಿಸಿ ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರು ಬಿಎಸ್‌ವೈ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್‌ ಮಾಡಿದ್ದರು.

ಇದನ್ನೂ ಓದಿ... ಈಶ್ವರಪ್ಪ ಲೆಟರ್‌ ಬಾಂಬ್‌: ಯಡಿಯೂರಪ್ಪ ವಿರುದ್ಧ ರಾಜ್ಯಪಾಲ, ವರಿಷ್ಠರಿಗೆ ದೂರು

ಇದೀಗ ತಿರುಗೇಟು ಕೊಟ್ಟಿರುವ ಬಿಜೆಪಿ, ‘ಕಾಂಗ್ರೆಸ್ ಬಗ್ಗೆ ನಾವು ಯಾವಾಗಲೂ ಹೇಳುತ್ತಿರುವುದು ಈಗ  ವಾಸ್ತವವಾಗಿದೆ. ಕಾಂಗ್ರೆಸ್ ಒಂದು ವಿಭಜಿತ ಮನೆಯಾಗಿದ್ದು, ಅದರ ನಾಯಕರು ಅಧಿಕಾರಕ್ಕಾಗಿ ಹೋರಾಡುತ್ತಿದ್ದಾರೆ. ಇತ್ತ ಅಕ್ರಮ ಸಿಡಿ ಉತ್ಪಾದನಾ ದಂಧೆಯಲ್ಲಿ ಕಾಂಗ್ರೆಸ್ ನೇರವಾಗಿ ತೊಡಗಿಸಿಕೊಂಡಿದೆ. ಕಾಂಗ್ರೆಸ್ ತನ್ನ ರಾಜಕೀಯ ಉಳಿವಿಗಾಗಿ ಹೊಲಸು ರಾಜಕಾರಣ ಮಾಡುತ್ತಿದೆ’ ಎಂದು ಆರೋಪಿಸಿದೆ.

ಇದನ್ನೂ ಓದಿ... ಬಿಎಸ್‌ವೈ ವಿರುದ್ಧ ಈಶ್ವರಪ್ಪ ಪತ್ರ: ಟ್ವೀಟ್‌ ಮೂಲಕ ಸುರ್ಜೇವಾಲ ವಾಗ್ದಾಳಿ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು