ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

81ನೇ ವಸಂತಕ್ಕೆ ಕಾಲಿಟ್ಟ ಮಲ್ಲಿಕಾರ್ಜುನ ಖರ್ಗೆ: ಬಿಎಸ್‌ವೈ, ಡಿಕೆಶಿ ಶುಭ ಹಾರೈಕೆ

ಅಕ್ಷರ ಗಾತ್ರ

ಬೆಂಗಳೂರು: ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಇಂದು (ಗುರುವಾರ) 81ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರ ಜನ್ಮದಿನದ ಅಂಗವಾಗಿ ಮಾಜಿ ಮುಖ್ಯಮಂತ್ರಿ, ಬಿಜೆಪಿ ಶಾಸಕ ಬಿ.ಎಸ್.ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶುಭ ಹಾರೈಸಿದ್ದಾರೆ.

‘ಹಿರಿಯ ನೇತಾರ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜನ್ಮದಿನದ ಹೃತ್ಪೂರ್ವಕ ಶುಭಕಾಮನೆಗಳು’ ಎಂದು ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

‘ಹಿರಿಯ ರಾಜಕಾರಣಿ, ರಾಜ್ಯಸಭೆ ವಿಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ದೇವರು ಅವರಿಗೆ ಆಯುರಾರೋಗ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

‘ರಾಜ್ಯಸಭೆ ವಿಪಕ್ಷ ನಾಯಕಮಲ್ಲಿಕಾರ್ಜುನ ಖರ್ಗೆ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮ್ಮ ವೈಚಾರಿಕ ಸ್ಪಷ್ಟತೆ, ಅಭಿವೃದ್ದಿಯ ಮುನ್ನೋಟ ಮತ್ತು ಪಕ್ಷದ ಸಿದ್ಧಾಂತದ ಬಗೆಗಿನ ಬದ್ಧತೆ ಹೊಸ ತಲೆಮಾರಿಗೆ ಮಾದರಿಯಾದುದು. ಮುಂದಿನ ದಿನಗಳಲ್ಲಿ ಆರೋಗ್ಯ, ಆಯುಷ್ಯ ಮತ್ತು ನೆಮ್ಮದಿ ನಿಮ್ಮದಾಗಲಿ’ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

‘ಹೈದರಾಬಾದ್ ಕರ್ನಾಟಕ ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 371ನೇ ಕಲಂಗೆ ತಿದ್ದುಪಡಿ ತರುವಲ್ಲಿ ಮಹತ್ವದ ಪಾತ್ರ ವಹಿಸಿದ ರಾಜ್ಯಸಭಾ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜನ್ಮದಿನದ ಶುಭಾಶಯಗಳು’ ಎಂದು ಕಾಂಗ್ರೆಸ್‌ ರಾಜ್ಯ ಘಟಕ ಟ್ವೀಟ್ ಮಾಡಿದೆ.

ನ್ಯಾಷನಲ್ ಹೆರಾಲ್ಡ್‌ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಇಂದು (ಗುರುವಾರ) ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.

ಈ ಹಿನ್ನೆಲೆಯಲ್ಲಿ ತಾವು ದೆಹಲಿಯಲ್ಲಿ ಇರುವುದರಿಂದ ಕಲಬುರಗಿ ಅಥವಾ ಬೆಂಗಳೂರಿನಲ್ಲಿ ಜನ್ಮದಿನ ಆಚರಿಸಿಕೊಳ್ಳುವುದಿಲ್ಲ. ಮುಂದಿನ ದಿನಗಳಲ್ಲಿ ಸದನ ಮುಗಿದ ನಂತರ ನಿಮ್ಮೆಲ್ಲರನ್ನು ಭೇಟಿ ಆಗಲಿದ್ದೇನೆ ಎಂದು ಕಾರ್ಯಕರ್ತರನ್ನು ಉದ್ದೇಶಿಸಿ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT