ನಾಯಕತ್ವ ಬದಲಾವಣೆ: ಪ್ರತಿಕ್ರಿಯಿಸದ ಈಶ್ವರಪ್ಪ

ಬೆಳಗಾವಿ: ನಾಯಕತ್ವ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಲು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ನಿರಾಕರಿಸಿದರು.
ಇಲ್ಲಿ ಇಲಾಖೆಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲು ಗುರುವಾರ ಬಂದಿದ್ದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.
'ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಬುಧವಾರ ಸಂಪುಟ ದರ್ಜೆ ಸಚಿವರ ಜೊತೆ ಚರ್ಚೆ ನಡೆಸಿದ್ದಾರೆ. ಸರ್ಕಾರದ ಚಟುವಟಿಕೆಗಳು ಹೇಗೆ ನಡೆಯುತ್ತಿವೆ ಎನ್ನುವುದನ್ನು ಕೇಳಿಕೊಂಡಿದ್ದಾರೆ' ಎಂದು ತಿಳಿಸಿದರು.
ಇದನ್ನೂ ಓದಿ: ರಾಜ್ಯ ಬಿಜೆಪಿ ಉಸ್ತುವಾರಿಗೆ ಅಹವಾಲೇ ಸವಾಲು
'ಪಕ್ಷ ಸಂಘಟನೆ ಹಾಗೂ ಅಭಿವೃದ್ಧಿ ವಿಚಾರದಲ್ಲಿ ಮಾರ್ಗದರ್ಶನ ಮಾಡಿದ್ದಾರೆ' ಎಂದರು.
'ಶುಕ್ರವಾರ ಸಂಜೆ ಬೆಂಗಳೂರಿನಲ್ಲಿ ಪಕ್ಷದ ಸಮನ್ವಯ ಸಮಿತಿ ಸಭೆ ಇದೆ. ಅದರಲ್ಲಿ ಭಾಗವಹಿಸಲಿದ್ದೇನೆ' ಎಂದು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.