ಶುಕ್ರವಾರ, ಆಗಸ್ಟ್ 12, 2022
24 °C

ರಾಜಕೀಯದಲ್ಲಿ ಯಾವುದೇ ಗೊಂದಲ ಇಲ್ಲ: ಬಿ.ಎಸ್‌.ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜಕೀಯದಲ್ಲಿ ಯಾವುದೇ ಗೊಂದಲ ಇಲ್ಲ. ಯಾರೋ ಒಂದಿಬ್ಬರ ಹೇಳಿಕೆಗಳು ಮಾಧ್ಯಮಗಳ ತಪ್ಪು ಗ್ರಹಿಕೆಗೆ ಕಾರಣವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು.

ಶುಕ್ರವಾರ ಬೆಳಿಗ್ಗೆ ವಿಧಾನಸೌಧದ ಬಳಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಗುರುವಾರ ಸುಮಾರು 60 ಕ್ಕೂ ಹೆಚ್ಚು ಶಾಸಕರು ಅರುಣ್‌ಸಿಂಗ್ ಅವರನ್ನು ಭೇಟಿ ಮಾಡಿದ್ದಾರೆ. ಇವರ ಯಾರ ಮಾತೂ ಹೈಲೈಟ್‌ ಆಗಿಲ್ಲ. ಆದರೆ, ಒಂದಿಬ್ಬರ ಮಾತು ಮಾತ್ರ ಅನಗತ್ಯ ಪ್ರಚಾರ ಸಿಗುತ್ತಿದೆ ಎಂದು ಹೇಳಿದರು.

ನನ್ನ ವಿರುದ್ಧ ಮಾತನಾಡುವವರನ್ನು ಅರುಣ್‌ಸಿಂಗ್ ಕರೆಸಿ ಮಾತನಾಡಿಸಿಲ್ಲ. ಯಾವುದೇ ಸಮಸ್ಯೆಗಳು ಇದ್ದರೆ ನೇರವಾಗಿ ಬಂದು ನನ್ನ ಜತೆ ಮಾತನಾಡಬಹುದು. ಅದನ್ನು ಬಿಟ್ಟು ಹಾದಿ ಬೀದಿಯಲ್ಲಿ ಮಾತನಾಡುವುದು ಸರಿಯಲ್ಲ ಎಂದೂ ಯಡಿಯೂರಪ್ಪ ತಿಳಿಸಿದರು.

ಯಾವುದೇ ಸಣ್ಣ ಪುಟ್ಟ ಗೊಂದಲಗಳು ಇದ್ದರೆ ಅದನ್ನು ವರಿಷ್ಠರು ಸರಿಪಡಿಸುತ್ತಾರೆ ಎಂದರು.

ಇದನ್ನೂ ಓದಿ... ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಸುಲಭವಲ್ಲ: ಸಂಸದ ದೇವೇಂದ್ರಪ್ಪ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು