ಬೆಂಗಳೂರು: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜೀನಾಮೆ ನೀಡುವ ವಿಷಯ ಪ್ರಸ್ತಾಪಿಸುವಾಗ ಕಣ್ಣೀರು ಹಾಕಿದ್ದಾರೆ. ಇದು ಕೇವಲ ಒಬ್ಬ ವ್ಯಕ್ತಿಯ ಕಣ್ಣೀರಲ್ಲ. ರಾಜ್ಯವನ್ನು ಪ್ರತಿನಿಧಿಸುವ ಮುಖ್ಯಮಂತ್ರಿಯ ಕಣ್ಣೀರು. ಇದರ ಹಿಂದಿನ ನೋವೇನು? ಆ ನೋವು ಕೊಟ್ಟವರು ಯಾರು?' ಎಂಬುದನ್ನು ರಾಜ್ಯದ ಜನರಿಗೆ ತಿಳಿಸಬೇಕು’ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪನವರ ರಾಜೀನಾಮೆ ಬಗ್ಗೆ ಸದಾಶಿವನಗರ ನಿವಾಸದಲ್ಲಿ ಸೋಮವಾರ ಪ್ರತಿಕ್ರಿಯಿಸಿದ ಅವರು, ‘ಯಡಿಯೂರಪ್ಪ ಅವರ ರಾಜೀನಾಮೆ ಹಿಂದೆ ಸಂತೋಷ ಕಾಣುತ್ತಿಲ್ಲ. ಬದಲಿಗೆ ಅವರ ನಿರ್ಧಾರದಲ್ಲಿ ನೋವು ಕಾಣುತ್ತಿದೆ. ಆ ನೋವು ಏನು’ ಎಂಬುದನ್ನು ಅವರು ಸ್ಪಷ್ಟಪಡಿಸಬೇಕು ಎಂದರು.

‘ರಾಜೀನಾಮೆ ಕುರಿತ ನಮ್ಮ ಪಕ್ಷದ ಅಭಿಪ್ರಾಯವನ್ನು ಮುಂದೆ ತಿಳಿಸುತ್ತೇವೆ. ಆದರೆ, ಅದಕ್ಕೂ ಮೊದಲು ಮುಖ್ಯಮಂತ್ರಿ ತಮ್ಮ ನೋವಿನ ಬಗ್ಗೆ ಜನರಿಗೆ ತಿಳಿಸಬೇಕು. ಎರಡು ವರ್ಷಗಳಲ್ಲಿ ಜನರು ಕೋವಿಡ್ ಸಮಸ್ಯೆಗೆ ತುತ್ತಾಗಿದ್ದರಿಂದ ನೋವಾಯಿತೇ? ಪಕ್ಷದ ಶಾಸಕರನ್ನು ಹೈಕಮಾಂಡ್ ನಿಯಂತ್ರಣ ಮಾಡಲಿಲ್ಲ ಎಂದು ನೋವಾಯಿತೇ? ಎಂಬುದು ಜನರಿಗೆ ಗೊತ್ತಾಗಬೇಕು’ ಎಂದರು.

ಇದನ್ನೂ ಓದಿ:ಸಿ.ಎಂ. ಬದಲಾವಣೆಯಿಂದ ರಾಜ್ಯಕ್ಕೆ ಪ್ರಯೋಜನವಿಲ್ಲ: ಸಿದ್ದರಾಮಯ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.