ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ರಾಜ್ಯ ಪ್ರವಾಸ: ಯಡಿಯೂರಪ್ಪ

Last Updated 27 ಆಗಸ್ಟ್ 2021, 15:38 IST
ಅಕ್ಷರ ಗಾತ್ರ

ಶಿವಮೊಗ್ಗ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಮೊದಲ ಬಾರಿ ಶಿವಮೊಗ್ಗಕ್ಕೆ ಶುಕ್ರವಾರ ಆಗಮಿಸಿದ ಬಿ.ಎಸ್.ಯಡಿಯೂರಪ್ಪ ಅವರನ್ನು ಅಪಾರ ಸಂಖ್ಯೆಯ ಕಾರ್ಯಕರ್ತರು ಹೂಗುಚ್ಛ ನೀಡಿ, ಪಟಾಕಿ ಸಿಡಿಸಿ ಸ್ವಾಗತಿಸಿದರು.

ವಿನೋಬನಗರದ ನಿವಾಸಕ್ಕೆ ಬಂದ ಯಡಿಯೂರಪ್ಪ ಅವರಿಗೆಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕರ್ತೆಯರು ರಾಖಿ ಕಟ್ಟಿ ಶುಭ ಹಾರೈಸಿದರು. ನಂತರ ಯಡಿಯೂರಪ್ಪ ಅವರು ಕಾರ್ಯಕರ್ತರ ಜತೆ ಚರ್ಚೆ ನಡೆಸಿದರು.

‘ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸುವೆ. ರಾಜ್ಯದ ಎಲ್ಲೆಡೆ ಪ್ರವಾಸ ಮಾಡುವೆ. ಮೊದಲು ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಭೇಟಿ ನೀಡುವೆ. ನಂತರ ಬಿಜೆಪಿಯೇತರ ಶಾಸಕರ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಳ್ಳುವೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಸ್ಪಷ್ಟ ಬಹುಮತ ಪಡೆಯಲಿದೆ. ಸ್ವಂತ ಶಕ್ತಿಯ ಮೇಲೆ ಅಧಿಕಾರ ಪಡೆಯಲಿದೆ’ ಎಂದು ಯಡಿಯೂರಪ್ಪ ಪ್ರತಿಕ್ರಿಯಿಸಿದರು.

ಶಿವಮೊಗ್ಗ ರಾಜ್ಯದಲ್ಲೇ ಮಾದರಿಯಾಗಿದೆ. ಆರು ತಿಂಗಳಲ್ಲಿ ವಿಮಾನನಿಲ್ದಾಣ ಕಾಮಗಾರಿ ಪೂರ್ಣಗೊಳ್ಳಲಿದೆ. ವಿಮಾನ ಹಾರಾಟ ಪ್ರಾರಂಭವಾಗಲಿದೆ. ಕೈಗಾರಿಕೆಗಳ ಹಬ್‌ ನಿರ್ಮಾಣವಾಗಲಿದೆ, ಹತ್ತಾರು ಸಾವಿರ ಯುವಕರಿಗೆ ಉದ್ಯೋಗ ಸಿಗಲಿದೆ. ಜಿಲ್ಲೆಯ ಅಭಿವೃದ್ಧಿ ಕುರಿತ ತಮ್ಮ ಕನಸು ನನಸಾಗುತ್ತಿದೆ ಎಂದು ಸಂತಸ ಹಂಚಿಕೊಂಡರು.

ಸಂಸದ ಬಿ.ವೈ.ರಾಘವೇಂದ್ರ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ.ಮೇಘರಾಜ್, ಮುಖಂಡ ಪದ್ಮನಾಭ ಭಟ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT