ಗುರುವಾರ , ಸೆಪ್ಟೆಂಬರ್ 23, 2021
22 °C

ಯಡಿಯೂರಪ್ಪ ಮುಂದುವರಿಯಲಿ: ಎಂ.ಪಿ. ಕುಮಾರಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ‘ರಾಜ್ಯದ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಅವರೇ ಮುಂದುವರಿಯಲಿ’ ಎಂದು ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಹೇಳಿದರು.

‘ದಕ್ಷಿಣ ಭಾರತದಲ್ಲಿ ಬಿಜೆಪಿ ಮೊದಲ ಬಾರಿಗೆ ಅಧಿಕಾರದ ಪಡೆಯುವಲ್ಲಿ ಯಡಿಯೂರಪ್ಪ ಅವರ ಶ್ರಮ ಇದೆ. ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ, ಪಕ್ಷಕ್ಕೆ ದುಸ್ಥಿತಿ ಬರಲಿದೆ. ಈ ಬಗ್ಗೆ ಹೈಕಮಾಂಡ್ ಸಮೀಕ್ಷೆ ನಡೆಸಲಿ’ ಎಂದರು.

‘ಮುಂದಿನ ವಿಧಾನಸಭೆ ಚುನಾವಣೆವರೆಗೆ ಅವರನ್ನೇ ಮುಂದುವರಿಸಿದರೆ, ಪಕ್ಷ ಗಟ್ಟಿಯಾಗಲಿದೆ. ಮುಖ್ಯಮಂತ್ರಿಯಾಗಲು ಎಲ್ಲರಿಗೂ ಆಸೆ ಇರುತ್ತದೆ. ಆದರೆ, ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ಯುವುದು ಕಠಿಣ ಕೆಲಸ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು