ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಸರ ಶಮನ: ಕೊಪ್ಪಳಕ್ಕೆ ಬಿ.ಎಸ್.ಯಡಿಯೂರಪ್ಪ

Last Updated 14 ಡಿಸೆಂಬರ್ 2022, 16:12 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರ ಬೇಸರವನ್ನು ಶಮನ ಮಾಡಿರುವುದರಿಂದ ಕೊಪ್ಪಳದಲ್ಲಿ ಗುರುವಾರ ನಡೆಯುವ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲು ನಿರ್ಧರಿಸಿದ್ದಾರೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ವಿವಿಧ ಜಿಲ್ಲಾ ಬಿಜೆಪಿ ಕಚೇರಿಗಳ ಉದ್ಘಾಟನೆಯನ್ನು ವರ್ಚುವಲ್‌ ಆಗಿ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಮೊದಲು ಯಡಿಯೂರಪ್ಪ ಅವರಿಗೆ ಆಹ್ವಾನ ನೀಡಿರಲಿಲ್ಲ. ಅಲ್ಲದೇ, ಜನಸಂಕಲ್ಪ ಯಾತ್ರೆಗೆ ಕರೆಯದೇ ನಿರ್ಲಕ್ಷಿಸುತ್ತಿದೆ ಎಂದು ಯಡಿಯೂರಪ್ಪ ಅವರು ಮುನಿಸಿಕೊಂಡಿದ್ದರು.

ಈ ವಿಷಯ ಬಹಿರಂಗವಾಗುತ್ತಿದ್ದಂತೆ ಅವರ ಮನವೊಲಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸುವಂತೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ಅವರಿಗೆ ವರಿಷ್ಠರು ಸೂಚಿಸಿದರು.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ರವಿಕುಮಾರ್ ಕಾರ್ಯಕ್ರಮ ಆಹ್ವಾನಿಸಿ, ಬೇಸರ ಶಮನ ಮಾಡುವ ಪ್ರಯತ್ನ ನಡೆಸಿದರು ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT