ಶುಕ್ರವಾರ, ಅಕ್ಟೋಬರ್ 23, 2020
24 °C

ರಾಜ್ಯದ ಹಿತರಕ್ಷಣೆಗಾಗಿ ಪ್ರಧಾನಿ ಕಣ್ಣು ತೆರೆಸಿ: ಬಿಎಸ್‌ವೈಗೆ ಸಿದ್ದರಾಮಯ್ಯ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಬಿಎಸ್‌ವೈ ಭೇಟಿ–ಸಂಗ್ರಹ ಚಿತ್ರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುತ್ತಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ 'ರಾಜ್ಯದ ಹಿತರಕ್ಷಣೆಗಾಗಿ ನಾಲ್ಕು ಮಾತುಗಳನ್ನು ಖಡಕ್‌ ಆಗಿ ಕೇಳಿ' ಎಂದು ಸಿದ್ದರಾಮಯ್ಯ ಸಲಹೆ ಮಾಡಿದ್ದಾರೆ.

ಹೇಗೋ ಪ್ರಧಾನಿ ಅವರ ಭೇಟಿಗೆ ಅವಕಾಶ ಪಡೆದಿದ್ದು, ಅದನ್ನು ಕುರ್ಚಿ ಉಳಿಸಿಕೊಳ್ಳುವ ಕಸರತ್ತಿಗೆ ಬಳಸದೆಯೇ ರಾಜ್ಯದ ಹಿತರಕ್ಷಣೆಗೆ ಬಳಸಿಕೊಳ್ಳುವಂತೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದಿಂದ ಕೇಳಿದ ಪರಿಹಾರ, ಕೇಂದ್ರ ಉಳಿಸಿಕೊಂಡಿರುವ ಬಾಕಿ, ಕೊರೊನಾ ನಿಯಂತ್ರಣದ ಸಾಮಗ್ರಿ ಖರೀದಿಯಲ್ಲಿ ರಾಜ್ಯದ ಶೇ 10ರಷ್ಟು ಬೇಡಿಕೆಯೂ ಪೂರೈಕೆಯಾಗದಿರುವ ವಿಚಾರಗಳನ್ನು ಪ್ರಧಾನಿ ಮೋದಿ ಅವರ ಗಮನಕ್ಕೆ ತಂದು ರಾಜ್ಯಕ್ಕೆ ನ್ಯಾಯ ಸಿಗುವಂತೆ ಮಾಡಿ ಎಂದು ಒತ್ತಾಯಿಸಿದ್ದಾರೆ.

'ಘೋಷಿಸಿದ್ದ ರೂ.20 ಲಕ್ಷ ಕೋಟಿ ಪ್ಯಾಕೇಜ್ ರಾಜ್ಯದ ಜನರನ್ನು ಇನ್ನೂ ತಲುಪಿಲ್ಲ. ಕೊರೊನಾ ಸೋಂಕಿಗಿಂತ ಹಸಿವು ಮತ್ತು ನಿರುದ್ಯೋಗದಿಂದ ಹೆಚ್ಚು ಜನ ಸಾವು-ನೋವಿಗೀಡಾಗುವ ಮೊದಲು, ಪ್ಯಾಕೇಜ್‌ನಲ್ಲಿ ರಾಜ್ಯಕ್ಕೆ ನ್ಯಾಯಬದ್ಧ ಪಾಲು ನೀಡಲು ಒತ್ತಾಯಿಸಿ. ರಾಜ್ಯಕ್ಕೆ ನೀಡಬೇಕಾಗಿರುವ ಜಿಎಸ್‌ಟಿ ಪರಿಹಾರ ರೂ.25,508 ಕೋಟಿ ನೀಡದೆ ಕೇಂದ್ರ ದ್ರೋಹ ಬಗೆದಿದೆ....ಈ ಅನ್ಯಾಯ ಸರಿಪಡಿಸಲು ಹೇಳಿ' ಎಂದು ಸಿದ್ದರಾಮಯ್ಯ ಸರಣಿ ಟ್ವೀಟ್‌ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು