ಗುರುವಾರ , ನವೆಂಬರ್ 26, 2020
21 °C

ಚನ್ನಪಟ್ಟಣದ ಬೊಂಬೆಗಳಿಗೆ ಬಿಎಸ್‌ಐ ಮುದ್ರೆ: ಆದೇಶ ಹಿಂಪಡೆಯಲು ಎಚ್‌ಡಿಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚನ್ನಪಟ್ಟಣದ ಬೊಂಬೆಗಳಿಗೂ ಭಾರತೀಯ ಮಾನಕ ಬ್ಯೂರೊ (ಬಿಎಸ್‌ಐ) ಮುದ್ರೆ ಕಡ್ಡಾಯಗೊಳಿಸಿರುವ ಆದೇಶವನ್ನು ಹಿಂದಕ್ಕೆ ಪಡೆಯುವಂತೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈ ಕುರಿತು ಸೋಮವಾರ ಸರಣಿ ಟ್ವೀಟ್‌ ಮಾಡಿರುವ ಅವರು, ‘ಬಿಎಸ್‌ಐ ಪ್ರಮಾಣಪತ್ರ ಪಡೆಯಲು ಸಾವಿರಾರು ರೂಪಾಯಿ ವೆಚ್ಚ ಮಾಡಬೇಕಾಗುತ್ತದೆ. ಕೇಂದ್ರದ ಈ ನಿರ್ಧಾರ ಗುಡಿ ಕೈಗಾರಿಕೆ ಗಳಿಗೆ ಮಾರಕವಾಗಲಿದೆ. ಕೇಂದ್ರ ಸರ್ಕಾರ ತಕ್ಷಣವೇ ಈ ನಿರ್ಧಾರವನ್ನು ವಾಪಸ್‌ ಪಡೆಯುವ ಮೂಲಕ ಗುಡಿ ಕೈಗಾರಿಕೆಗಳ ರಕ್ಷಣೆಗೆ ಮುಂದಾಗಬೇಕು’ ಎಂದು ಒತ್ತಾಯಿಸಿದ್ದಾರೆ.

‘ಮನ್‌ ಕಿ ಬಾತ್‌’ ಕಾರ್ಯಕ್ರಮದಲ್ಲಿ ಚನ್ನಪಟ್ಟಣದ ಬೊಂಬೆ ತಯಾರಕರ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಈಗ ಅವರ ಮೇಲೆ ಕೆಂಗಣ್ಣು ಬೀರಿದ್ದಾರೆ. ದೊಡ್ಡ ಉದ್ದಿಮೆದಾರರ ಹಿತ ಕಾಯುವ ಇಂತಹ ನಿರ್ಧಾರದಿಂದ ಆಟಿಕೆ ತಯಾರಿಕೆಯನ್ನೇ ನಂಬಿ ಬದುಕುವ ಲಕ್ಷಾಂತರ ಮಂದಿಯ ಉದ್ಯೋಗಕ್ಕೆ ಸಂಚಕಾರ ಬರಲಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು