ಸೋಮವಾರ, ಸೆಪ್ಟೆಂಬರ್ 21, 2020
23 °C

ರಾಜ್ಯದ ಹಲವೆಡೆ ಪ್ರವಾಹ: ₹ 50 ಕೋಟಿ ತುರ್ತು ಪರಿಹಾರ ಬಿಡುಗಡೆಗೆ ಬಿಎಸ್‌ವೈ ಆದೇಶ

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಜಿಲ್ಲಾ ಉಸ್ತುವಾರಿ ಸಚಿವರಿಗೆ ನಿರ್ದೇಶನ ನೀಡಿರುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, 'ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪ್ರವಾಸ ಕೈಗೊಳ್ಳುವಂತೆ ಸಂಬಂಧಪಟ್ಟ ಜಿಲ್ಲಾ ವಸ್ತುವಾರಿ ಸಚಿವರಿಗೆ ನಿರ್ದೇಶನ ನೀಡಿದ್ದೇನೆ. ಪರಿಹಾರ ವಿತರಣೆ ಬಗ್ಗೆ ಖಚಿತಪಡಿಸಿಕೊಳ್ಳಲು ಜಿಲ್ಲೆಯಲ್ಲಿಯೇ ಉಳಿದುಕೊಳ್ಳಬೇಕು ಮತ್ತು ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದ್ದೇನೆ' ಎಂದು ಯಡಿಯೂರಪ್ಪ ಹೇಳಿದ್ದಾರೆ.  

ನೆರೆ ಪೀಡಿತ ಜಿಲ್ಲೆಗಳಲ್ಲಿ ತುರ್ತು ಪರಿಹಾರ ಕಾರ್ಯಗಳಿಗೆ ₹ 50 ಕೋಟಿ ಬಿಡುಗಡೆ ಮಾಡಲು ಆದೇಶಿಸಿದ್ದೇನೆ. ಪ್ರವಾಹ ಪರಿಸ್ಥಿತಿ ತಲೆದೋರಿರುವ ಪ್ರದೇಶಗಳಲ್ಲಿ ತಕ್ಷಣ ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ಸಚಿವರಿಗೆ ಹೇಳಿದ್ದೇನೆ. ಅಗತ್ಯಬಿದ್ದರೆ ಪರಿಹಾರ ಕಾರ್ಯಗಳಿಗೆ ಹೆಚ್ಚುವರಿ ಹಣ ನೀಡುವುದಾಗಿ ಭರವಸೆ ನೀಡಿದ್ದೇನೆ ಎಂದು ಬಿಎಸ್‌ವೈ ಟ್ವೀಟ್‌ ಮಾಡಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು