ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಬೆಳಿಗ್ಗೆ ಕಲಬುರ್ಗಿಯಿಂದ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಲಿದ್ದಾರೆ.
ಈ ಸಂದರ್ಭದಲ್ಲಿ ಅವರು ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದು, ಪಕ್ಷದ ಅಧ್ಯಕ್ಷರನ್ನೂ ಭೇಟಿ ಮಾಡುವ ಸಾಧ್ಯತೆ ಇದೆ. ಇದೇ 18 ರಂದು ಕರ್ನಾಟಕ ಭವನ ನಂ–1 ರ (ಕಾವೇರಿ) ಮರು ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. 19 ರಂದು ನಗರಕ್ಕೆ ವಾಪಸಾಗಲಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಕುರಿತು ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪಕ್ಷದ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ಜತೆ ಮಾತುಕತೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯಕ್ಕೆ ಸಂಬಂಧಿಸಿದ ಹಲವು ಯೋಜನೆಗಳು, ಜಿಎಸ್‌ಟಿ ಪರಿಹಾರ ನೀಡುವಂತೆ ಹಣಕಾಸು ಸಚಿವರನ್ನು ಒತ್ತಾಯಿಸುವ ಸಾಧ್ಯತೆ ಇದೆ. ಪ್ರಧಾನಿ ಮೋದಿಯವರ ಭೇಟಿಗೂ ಪ್ರಯತ್ನಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.