ಮಂಗಳವಾರ, ಆಗಸ್ಟ್ 16, 2022
30 °C

ಬಸ್‌ ಅಪಘಾತ: ₹ 80 ಲಕ್ಷ ಪರಿಹಾರ ಕೊಡಿಸಿದ ಲೋಕ ಅದಾಲತ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಬಳಿ ನಡೆದ ಬಸ್‌ ಅಪಘಾತದಲ್ಲಿ ಪತಿಯನ್ನು ಕಳೆದುಕೊಂಡಿದ್ದ ಶಿವಮೊಗ್ಗದ ಸಹನಾ ಅವರಿಗೆ ಲೋಕ ಅದಾಲತ್‌ನಲ್ಲಿ ₹ 80 ಲಕ್ಷ ಪರಿಹಾರ ದೊರಕಿತು.

ದೂರುದಾರರು, ವಿಮಾ ಕಂಪನಿಗಳ ಮುಖ್ಯಸ್ಥರ ನಡುವೆ ನಡೆದ ಸಂಧಾನದ ಫಲವಾಗಿ ಈ ಆದೇಶ ಹೊರಡಿಸಲಾಗಿದೆ. ಮೋಟಾರು ವಾಹನ ಅಪಘಾತ ಪ್ರಕರಣಗಳಲ್ಲಿ ಅತಿ ಹೆಚ್ಚು ಮೊತ್ತ ಘೋಷಿಸಿದ ವಿಶೇಷ ಪ್ರಕರಣವಿದು.

ದೂರುದಾರರು ವಿಮಾ ಕಂಪನಿಯಿಂದ ₹ 1.20 ಕೋಟಿ ಪರಿಹಾರಕ್ಕೆ ಮನವಿ ಮಾಡಿದ್ದರು. ಸಂಧಾನದ ನಂತರ ನಿಗದಿತ ಮೊತ್ತ ಪಡೆಯಲು ಒಪ್ಪಿಗೆ ಸೂಚಿಸಿದರು ಎಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮುಸ್ತಫಾ ಹುಸೇನ್ ಶನಿವಾರ ಮಾಹಿತಿ ನೀಡಿದರು.

ಈ ಬಾರಿಯ ಲೋಕ ಅದಾಲತ್‍ನಲ್ಲಿ ಮೋಟಾರು ವಾಹನಗಳ 125ಕ್ಕೂ ಹೆಚ್ಚಿನ ಪ್ರಕರಣಗಳು ಇತ್ಯರ್ಥಗೊಂಡಿವೆ. ಕೊರೊನಾ ಸೋಂಕಿನ ನಂತರ ನಿಧಾನವಾಗಿದ್ದ ನ್ಯಾಯಾಲಯದ ಚಟುವಟಿಕೆ ಚುರುಕುಗೊಳ್ಳುತ್ತಿವೆ. ಹೊಸ ಪ್ರಕರಣಗಳ ಸಂಖ್ಯೆಯಲ್ಲೂ ಹೆಚ್ಚಳವಾಗಿದೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು