ಬೆಂಗಳೂರು: ದುಡಿಯುವ ವರ್ಗದ ಮಹಿಳೆಯರಿಗೆ ಮತ್ತು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ನೀಡುವ ರಾಜ್ಯ ಸರ್ಕಾರದ ಯೋಜನೆ ಏಪ್ರಿಲ್ 1ರಂದು ಜಾರಿಗೆ ಬಂದಿಲ್ಲ.
ಉಚಿತ ಪಾಸ್ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್‌ನಲ್ಲಿ ಘೋಷಿಸಿದ್ದರು. ‘ಸರ್ಕಾರದಿಂದ ಯಾವುದೇ ಆದೇಶ ಬಾರದ ಕಾರಣ ಪಾಸ್ ವಿತರಣೆ ಮಾಡಿಲ್ಲ’ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಘಟಕ, ‘ಬಸವರಾಜ ಬೊಮ್ಮಾಯಿ ಅವರು ಏಪ್ರಿಲ್ ಒಂದರಿಂದ ಎಲ್ಲಾ ದುಡಿಯುವ ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ಎಂಬ ಹೂವನ್ನು ಕಿವಿಯ ಮೇಲಿಟ್ಟಿದ್ದರು. ಏಪ್ರಿಲ್ 1ರಿಂದ ಎಂದಿದ್ದೆ ಮಹಿಳೆಯರನ್ನು ಮೂರ್ಖರನ್ನಾಗಿಸಲು’ ಎಂದು ವ್ಯಂಗ್ಯವಾಡಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.