ಸೋಮವಾರ, ಜುಲೈ 4, 2022
22 °C

ಬಸ್ ಅಪಘಾತ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪಾವಗಡ: ತಾಲ್ಲೂಕಿನ ಪಳವಳ್ಳಿ ಕಟ್ಟೆ ಬಳಿ ಕಳೆದ ವಾರ ಸಂಭವಿಸಿದ ಖಾಸಗಿ ಬಸ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದ್ವಿತೀಯ ಪಿಯು ವಿದ್ಯಾರ್ಥಿ ಶನಿವಾರ ಮೃತಪಟ್ಟಿ ದ್ದಾನೆ. ಇದರಿಂದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿದೆ.

ತಲೆ ಹಾಗೂ ಬೆನ್ನು ಮೂಳೆಗೆ ತೀವ್ರ ಪೆಟ್ಟಾಗಿದ್ದ ಪಾವಗಡ ತಾಲ್ಲೂಕಿನ ಬುಡ್ಡಾರೆಡ್ಡಿಹಳ್ಳಿ ಶ್ರೀನಿವಾಸ್ ಅವರ ಪುತ್ರ ಮಹೇಂದ್ರ (18) ಮೃತ ವಿದ್ಯಾರ್ಥಿ. ಅಪಘಾತ ನಡೆದ ದಿನವೇ ಆತನನನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗಲಿಲ್ಲ.

ಮಹೇಂದ್ರ ಚಿಕಿತ್ಸೆಗೆ ಸುಮಾರು ₹10 ಲಕ್ಷದಿಂದ ₹15 ಲಕ್ಷ ವೆಚ್ಚ ಆಗುತ್ತದೆ ಎಂದು ಖಾಸಗಿ ಆಸ್ಪತ್ರೆ ತಿಳಿಸಿತ್ತು. ತಾಲ್ಲೂಕಿನ ಸಂಘ–ಸಂಸ್ಥೆ ಗಳು, ಕಾಲೇಜಿನ ವಿದ್ಯಾರ್ಥಿಗಳು, ಸಿಬ್ಬಂದಿ ಚಿಕಿತ್ಸೆಗೆ ಹಣ ಸಂಗ್ರಹಿಸಿ ಕಳಿಸಿದ್ದರು.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು