ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

3 ಲಕ್ಷ ಟನ್ ರಾಗಿ ಖರೀದಿ- ರೈತರ ಬೇಡಿಕೆಗೆ ಕೇಂದ್ರದ ಸಮ್ಮತಿ: ಬೊಮ್ಮಾಯಿ

Last Updated 30 ಏಪ್ರಿಲ್ 2022, 14:42 IST
ಅಕ್ಷರ ಗಾತ್ರ

ನವದೆಹಲಿ: ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿ ರಾಜ್ಯದಲ್ಲಿ ಹೆಚ್ಚುವರಿಯಾಗಿ 3 ಲಕ್ಷ ಟನ್ ರಾಗಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕೇಂದ್ರದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪೀಯೂಷ್‌ ಗೋಯಲ್‌ ಅವರಿಗೆ ಶನಿವಾರ ಈ ಕುರಿತ ಮನವಿ ಸಲ್ಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯದಾದ್ಯಂತ ಈಗಾಗಲೇ ಎರಡು ಹಂತಗಳಲ್ಲಿ 3.14 ಲಕ್ಷ ಟನ್‌ ರಾಗಿ ಖರೀದಿಸಲಾಗಿದೆ. ಮೊದಲು 2 ಲಕ್ಷ ಹಾಗೂ ನಂತರ ₹ 485 ಕೋಟಿ ಮಂಜೂರು ಮಾಡಿ, 1.14 ಲಕ್ಷ ಟನ್ ಖರೀದಿಸಲಾಗಿತ್ತು. ಅಧಿಕ ಪ್ರಮಾಣದಲ್ಲಿ ರಾಗಿ ಬೆಳೆದಿದ್ದ ರಾಜ್ಯದ ಐದಾರು ಜಿಲ್ಲೆಗಳ ರೈತರಿಗೆ ಅನುಕೂಲ ಕಲ್ಪಿಸಲೆಂದೇ ಹೆಚ್ಚುವರಿಯಾಗಿ 3 ಲಕ್ಷ ಮೆಟ್ರಿಕ್‌ ಟನ್ ರಾಗಿ ಖರೀದಿಗೆ ಅನುಮತಿ ಕೋರಿ ಕೇಂದ್ರ ಸಚಿವರಿಗೆ ಸಲ್ಲಿಸಲಾದ ಮನವಿಗೆ ಸೂಕ್ತ ಸ್ಪಂದನೆ ದೊರೆತಿದೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT