ಮಂಗಳವಾರ, ಜೂನ್ 22, 2021
27 °C

ಕೃಷಿ ಭೂಮಿ ಖರೀದಿ ಇನ್ನು ಸಲೀಸು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಕೃಷಿ ಭೂಮಿ ಖರೀದಿಸುವವರಿಗೆ ತಕ್ಷಣವೇ ನೋಂದಣಿ ಪ್ರಕ್ರಿಯೆ ಮಾಡಿಕೊಡಬೇಕು ಎಂದು ಸಬ್‌ ರಿಜಿಸ್ಟ್ರಾರ್‌ಗಳಿಗೆ ಕಂದಾಯ ಇಲಾಖೆ ಸೂಚಿಸಿದೆ.

ಭೂ ಸುಧಾರಣೆ ತಿದ್ದುಪಡಿ ಕಾಯ್ದೆಯ ಸುಗ್ರೀವಾಜ್ಞೆಗೆ ಅಂಕಿತ ಬಿದ್ದ ದಿನದಿಂದಲೇ ಕಾನೂನು ಜಾರಿ ಆಗಿದೆ. ಆದರೆ, ಇದಕ್ಕೊಂದು ಆದೇಶ ಹೊರಡಿಸುವಂತೆ ಸಬ್ ‌ರಿಜಿಸ್ಟ್ರಾರ್‌ಗಳು ಕೋರಿಕೆ ಸಲ್ಲಿಸಿದ್ದರು. ಆದ್ದರಿಂದ ಈ ಕುರಿತು ಆದೇಶ ಹೊರಡಿಸಲಾಗಿದೆ ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ಭೂಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದು ಸುಗ್ರಿವಾಜ್ಞೆ ಹೊರಡಿಸಿದ ಬಗ್ಗೆ ರಾಜ್ಯದಲ್ಲಿ ಪರ–ವಿರೋಧ ಚರ್ಚೆ ವ್ಯಾಪಕವಾಗಿ ನಡೆದಿತ್ತು. ಅಂತಿವಾಗಿ ಕಾನೂನು ಜಾರಿಗೆ ಬಂದಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು