ಸೋಮವಾರ, ಅಕ್ಟೋಬರ್ 18, 2021
24 °C

ನಾಳಿನ ಪ್ರಮುಖರ ಸಭೆಯಲ್ಲಿ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ: ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಉಪ ಚುನಾವಣೆ ನಡೆಯಲಿರುವ ಸಿಂದಗಿ ಮತ್ತು ಹಾನಗಲ್‌ ಕ್ಷೇತ್ರಗಳಿಗೆ ಪಕ್ಷದ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಕೇಂದ್ರಕ್ಕೆ ಕಳುಹಿಸಲು ಪಕ್ಷದ ಪ್ರಮುಖರ ಸಭೆ (ಕೋರ್‌ ಕಮಿಟಿ) ಭಾನುವಾರ (ಅ. 3) ನಡೆಯಲಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಎರಡೂ ಉಪ ಚುನಾವಣೆಯನ್ನು ಪಕ್ಷದ ನೇತೃತ್ವದಲ್ಲಿ ಎದುರಿಸುತ್ತೇವೆ. ಈಗಾಗಲೇ ಬಹಳ ಸಿದ್ಧತೆ ಮಾಡಿಕೊಂಡಿದ್ದೇವೆ. ಕ್ಷೇತ್ರಗಳಲ್ಲಿ ಈಗಿರುವ ವಾತಾವರಣದಲ್ಲಿ ಬಿಜೆಪಿ ಅತ್ಯಂತ ಹೆಚ್ಚಿನ ಮತಗಳಿಂದ ಜಯ ಗಳಿಸುವ ವಿಶ್ವಾಸವಿದೆ’ ಎಂದರು.

‘ಎರಡೂ ಕ್ಷೇತ್ರಗಳಲ್ಲಿ ಪ್ರತ್ಯೇಕ ಸಭೆಗಳನ್ನು ಮಾಡಿದ್ದೇವೆ. ಬೂತ್‌ಮಟ್ಟ‌, ಜಿಲ್ಲಾಮಟ್ಟದಲ್ಲಿ ಹಿರಿಯ ಮುಖಂಡರ, ಸಭೆ ಮಾಡಿ ಅಭ್ಯರ್ಥಿಗಳನ್ನು ಪಟ್ಟಿ ಸಿದ್ಧಪಡಿಸುತ್ತಿದ್ದೇವೆ. ಭಾನುವಾರ ಮಧ್ಯಾಹ್ನ ನಡೆಯಲಿರುವ ರಾಜ್ಯ ಪ್ರಮುಖರ ಸಭೆಯಲ್ಲಿ ಚರ್ಚಿಸಿ ಕೇಂದ್ರಕ್ಕೆ ಹೆಸರು ಕಳುಹಿಸುತ್ತೇವೆ. ಚುನಾವಣೆಗೆ ಉಸ್ತುವಾರಿಗಳನ್ನು ಮತ್ತು ಸಚಿವರನ್ನು ನೇಮಿಸುವ ಬಗ್ಗೆಯೂ ಪ್ರಮುಖರ ಸಭೆಯಲ್ಲಿ ತೀರ್ಮಾನಿಸುತ್ತೇವೆ’ ಎಂದರು.

ಹಾನಗಲ್‌ ಕ್ಷೇತ್ರದಲ್ಲಿ ಉದಾಸಿ ಕುಟುಂಬದ ಸದಸ್ಯರಿಗೆ ಟಿಕೆಟ್‌ ನೀಡಲಾಗುತ್ತಯೇ ಎಂಬ ಪ್ರಶ್ನೆಗೆ, ‘ಎಲ್ಲ ವಿಷಯಗಳನ್ನು ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚಿಸುತ್ತೇವೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು