ಸಿಂದಗಿ–ಹಾನಗಲ್: ಫಲಿತಾಂಶ ಇಂದು

ವಿಜಯಪುರ/ಹಾವೇರಿ: ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನ.2ರಂದು ಬೆಳಿಗ್ಗೆ 8 ಗಂಟೆಗೆ ಆರಂಭವಾಗಲಿದೆ.
ವಿಜಯಪುರ ನಗರದ ಸೈನಿಕ ಶಾಲೆಯ ‘ಒಡೆಯರ ಹೌಸ್’ನಲ್ಲಿ ಸಿಂದಗಿ ಕ್ಷೇತ್ರದ ಮತ ಎಣಿಕೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಒಟ್ಟು 22 ಸುತ್ತು ಮತ ಎಣಿಕೆ ನಡೆಯಲಿದೆ.
ಹಾವೇರಿ ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಹಾನಗಲ್ ಕ್ಷೇತ್ರದ ಮತ ಎಣಿಕೆ ನಡೆಯಲಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.