ಯಡಿಯೂರಪ್ಪ-ಈಶ್ವರಪ್ಪ ನಡುವೆ ಭಿನ್ನಾಭಿಪ್ರಾಯ ಇಲ್ಲ: ಅರುಣ್ ಸಿಂಗ್

ಮಂಗಳೂರು: ‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಚಿವ ಕೆ.ಎಸ್.ಈಶ್ವರಪ್ಪ ನಡುವಿನ ಭಿನ್ನಾಭಿಪ್ರಾಯ ಶಮನಗೊಂಡಿದೆ. ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ’ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.
ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
‘ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ’ ಎಂದ ಅವರು, ‘ರಾಜ್ಯದಲ್ಲಿ ನಾಯಕತ್ವ ಬದಲಾವಣೆ’ ಬಗ್ಗೆ ಶಾಸಕ ಬಸನಗೌಡ ಯತ್ನಾಳ್ ನೀಡಿದ ಹೇಳಿಕೆ ಕುರಿತ ಪ್ರತಿಕ್ರಿಯಿಸಲು ನಿರಾಕರಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.