ಮಂಗಳವಾರ, ಮಾರ್ಚ್ 21, 2023
28 °C

ಬಿಎಸ್‌ವೈಗೆ ಕಲ್ಲು ಎಸೆದರೆ ಪಕ್ಷಕ್ಕೆ ಪೆಟ್ಟು: ಬಿ.ವೈ ವಿಜಯೇಂದ್ರ

ಪ್ರಜಾವಾಣಿ ವಾರ್ತೆ ‌‌ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ‘ಯಡಿಯೂರಪ್ಪ ಅವರಿಗೆ ಕಲ್ಲು ಎಸೆದರೆ ಅದು ಪಕ್ಷಕ್ಕೆ ಪೆಟ್ಟು ಎನ್ನುವುದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಬಿಎಸ್‌ವೈ ಬಗ್ಗೆ ಶಾಸಕ ಬಸನಗೌಡ ಯತ್ನಾಳ ಇನ್ನು ಟೀಕೆ ಮಾಡುವುದಿಲ್ಲ ಎಂದು ಹೇಳಿಕೆ ನೀಡಿರುವುದು ಪಕ್ಷದ ಭವಿಷ್ಯದ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ’ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.

ವಿಜಯಪುರ ಜಿಲ್ಲೆಯ ಹೊರ್ತಿ ಗ್ರಾಮದಲ್ಲಿ ಶುಕ್ರವಾರ ಮಾಧ್ಯಮದ ಜೊತೆ ಮಾತನಾಡಿದ ಅವರು, ‘ಯತ್ನಾಳ ಬಗ್ಗೆ ನಮಗೆ ವೈಯಕ್ತಿಕ ವಿರೋಧವಿಲ್ಲ. ನಮ್ಮ ಹೇಳಿಕೆಗಳು ಪಕ್ಷಕ್ಕೆ ಪೂರಕವಾಗಿರಬೇಕೇ ಹೊರತು ಪಕ್ಷಕ್ಕೆ ಧಕ್ಕೆ ತರುವಂತಿರಬಾರದು’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು