ಮಂಗಳವಾರ, ಮಾರ್ಚ್ 21, 2023
31 °C

ಮೇಕೆದಾಟು ಡ್ಯಾಂ ವಿರೋಧಿಸಿದ ಅಣ್ಣಾಮಲೈ ಟ್ವೀಟ್‌ಗೆ ಬೆಂಬಲ: ರವಿ ವಿರುದ್ಧ ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೇಕೆದಾಟು ಸಮಾನಾಂತರ ಜಲಾಶಯ ನಿರ್ಮಿಸುವ ಕರ್ನಾಟಕದ ಯೋಜನೆ ವಿರೋಧಿಸಿ ಉಪವಾಸ ಸತ್ಯಾಗ್ರಹಕ್ಕೆ ಸಂಬಂಧಿಸಿದಂತೆ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಅವರ ಟ್ವೀಟ್‌ ಅನ್ನು ಮರು ಟ್ವೀಟ್‌ ಮಾಡಿ ಬೆಂಬಲಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ನಡೆಗೆ ತೀವ್ರ ಟೀಕೆವ್ಯಕ್ತವಾಗಿದೆ.

ತಂಜಾವೂರಿನಲ್ಲಿ ಇದೇ 5ರಂದು ನಡೆದ ಉಪವಾಸ ಸತ್ಯಾಗ್ರಹದಲ್ಲಿ ಭಾಗಿಯಾದ ಫೋಟೊಗಳನ್ನು ಹಂಚಿಕೊಂಡಿದ್ದ ಅಣ್ಣಾಮಲೈ, ‘ಯೋಜನೆ ಜಾರಿಗೆ ಒತ್ತಡ ಹೇರದಂತೆ ಕರ್ನಾಟಕದ ಸಹೋದರ, ಸಹೋದರಿಯರಲ್ಲಿ ಮನವಿ ಮಾಡುತ್ತೇನೆ’ ಎಂದು ಸಂದೇಶ ಹಾಕಿದ್ದರು. ಅದನ್ನು ಶಾಸಕರೂ ಆಗಿರುವ ರವಿ ಮರು ಟ್ವೀಟ್‌ ಮಾಡಿ ಬೆಂಬಲಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು