ಶುಕ್ರವಾರ, ನವೆಂಬರ್ 27, 2020
23 °C

ಹೊಸದಾಗಿ ವಿಜಯನಗರ ಜಿಲ್ಲೆ ರಚನೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Anand Singh

ಬೆಂಗಳೂರು: ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಹೊಸದಾಗಿ ವಿಜಯನಗರ ಜಿಲ್ಲೆ ರಚಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

‘ಇದು ರಾಜ್ಯದ 31ನೇ ಜಿಲ್ಲೆಯಾಗಲಿದ್ದು, ಇದಕ್ಕೆ ಯಾವ ಯಾವ ತಾಲ್ಲೂಕುಗಳನ್ನು ಸೇರಿಸಬೇಕು ಎಂಬ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದು ಅರಣ್ಯ ಸಚಿವ ಆನಂದ್‌ ಸಿಂಗ್‌ ಅವರು ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ವಿಜಯನಗರ ಜಿಲ್ಲೆ ರಚನೆಗೆ ಸಚಿವ ಸಂಪುಟದಲ್ಲಿ ಒಮ್ಮತದ ಒಪ್ಪಿಗೆ ಸಿಕ್ಕಿದೆ. ವಿಜಯನಗರ ಜಿಲ್ಲೆ ಸ್ಥಾಪನೆಗಾಗಿ ಹಲವು ದಶಕಗಳಿಂದ ಹೋರಾಟ ನಡೆದಿತ್ತು. ಒಂದು ಕಾಲದಲ್ಲಿ ವಿಜಯನಗರ ಹಿಂದೂ ಸಾಮ್ರಾಜ್ಯದ ಹೃದಯ ಸಾಮ್ರಾಟ ಎಂಬ ಸ್ಥಾನ ಪಡೆದಿತ್ತು. ಇದು ಜಿಲ್ಲಾ ಕೇಂದ್ರವಾಗಬೇಕು ಎಂಬುದು ಎಲ್ಲರ ಅಪೇಕ್ಷೆಯಾಗಿತ್ತು. ಇದಕ್ಕಾಗಿ ಪಕ್ಷಾತೀತವಾಗಿ ಹೋರಾಟ ನಡೆದಿತ್ತು. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಜಿಲ್ಲೆಯ ವಿಭಜನೆಗೆ ಕೆಲವರ ವಿರೋಧವಿತ್ತು. ಅಂತಿಮವಾಗಿ ಎಲ್ಲರ ವಿಶ್ವಾಸವನ್ನು ತೆಗೆದುಕೊಂಡೇ ಈ ನಿರ್ಣಯ ತೆಗೆದುಕೊಳ್ಳಲಾಯಿತು’ ಎಂದು ಆನಂದ್‌ ಸಿಂಗ್‌ ತಿಳಿಸಿದರು.

ವಿಜಯನಗರ ಜಿಲ್ಲೆಯ ರಚನೆಗೆ ಸಂಬಂಧಿಸಿದಂತೆ ಹಿಂದಿನಿಂದಲೂ ಹೋರಾಟ ನಡೆದಿತ್ತು. ಈ ವಿಷಯಕ್ಕೆ ಸಂಬಂಧಿಸಿದಂತೆ ಕೆಲವು ಸಂದರ್ಭದಲ್ಲಿ ಪರ ಮತ್ತು ವಿರೋಧ ಅಭಿಪ್ರಾಯ ವ್ಯಕ್ತವಾಗಿತ್ತು. ಅಂತಿಮವಾಗಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ತೀರ್ಮಾನ ತೆಗೆದುಕೊಳ್ಳಲಾಗಿದೆ. ಆಡಳಿತಾತ್ಮಕವಾಗಿ ಉತ್ತಮ ನಿರ್ಧಾರ ಎಂದು ಸಮಾಜಕಲ್ಯಾಣ ಸಚಿವ ಶ್ರೀರಾಮುಲು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು