ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರು ಹೊಸ ಖಾಸಗಿ ವಿವಿ ಸ್ಥಾಪನೆ ಮಸೂದೆಗಳಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ

Last Updated 26 ಡಿಸೆಂಬರ್ 2022, 7:39 IST
ಅಕ್ಷರ ಗಾತ್ರ

ಬೆಳಗಾವಿ: ರಾಜ್ಯದಲ್ಲಿ ಆರು ಹೊಸ ಖಾಸಗಿ ವಿಶ್ವವಿದ್ಯಾಲಯಗಳ ಸ್ಥಾಪನೆಯ ಮಸೂದೆಗಳಿಗೆ ಸೋಮವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಬೆಂಗಳೂರಿನಲ್ಲಿ ಸಪ್ತಗಿರಿ ವಿಶ್ವವಿದ್ಯಾಲಯ, ಟಿ.ಜಾನ್‌ ವಿಶ್ವವಿದ್ಯಾಲಯ, ಆಚಾರ್ಯ ವಿಶ್ವವಿದ್ಯಾಲಯ, ರಾಜ್ಯ ಒಕ್ಕಲಿಗರ ಸಂಘದಿಂದ ವಿಶ್ವವಿದ್ಯಾಲಯ, ದಾವಣಗೆರೆಯಲ್ಲಿ ಜಿ.ಎಂ ವಿಶ್ವವಿದ್ಯಾಲಯ, ಬಳ್ಳಾರಿಯಲ್ಲಿ ಕಿಷ್ಕಿಂದಾ ವಿಶ್ವವಿದ್ಯಾಲಯಗಳ ಸ್ಥಾಪನೆಯ ಮಸೂದೆ ಮಂಡನೆಗೆ ಒಪ್ಪಿಗೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರು ಹೇಳಿದರು.

ಅಗ್ನಿ ಶಾಮಕ ತಿದ್ದುಪಡಿ ಮಸೂದೆ 2022: ಯಾವುದೇ ವ್ಯಕ್ತಿ ಕಟ್ಟಡ ನಿರ್ಮಾಣ ಮಾಡುವ ಸಂದರ್ಭದಲ್ಲಿ ಅಗ್ನಿ ಶಾಮಕ ಇಲಾಖೆಯಿಂದ ನಿರಪೇಕ್ಷಣಾ ಪ್ರಮಾಣ ಪತ್ರ ಪಡೆಯಬೇಕು ಎಂಬ ಅಂಶವನ್ನು ಮಸೂದೆಗೆ ಸೇರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT