ಬೆಂಗಳೂರು:ಖಾತೆ ಹಂಚಿಕೆಯಿಂದ ತೀವ್ರ ಅಸಮಾಧಾನಗೊಂಡಿರುವ ಪರಿಸರ, ಜೀವ ಶಾಸ್ತ್ರ ಮತ್ತು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಭಾನುವಾರ ಬೆಳಿಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು.

ಶನಿವಾರ ಬೆಳಿಗ್ಗೆ ನೂತನ ಸಚಿವರಿಗೆ ಮುಖ್ಯಮಂತ್ರಿ ಖಾತೆ ಹಂಚಿಕೆ ಮಾಡಿದ್ದರು. ಆ ಬೆನ್ನಲ್ಲೆ, ಕೇಳಿದ್ದ ಖಾತೆ ಸಿಗಲಿಲ್ಲವೆಂದು ಆನಂದ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದರು.

ಆರ್.ಟಿ. ನಗರದಲ್ಲಿರುವ ಮುಖ್ಯಮಂತ್ರಿ ನಿವಾಸಕ್ಕೆ ಕುಟುಂಬ ಸಮೇತ ಬಂದ ಆನಂದ ಸಿಂಗ್, ಖಾತೆ ಬದಲಿಸುವಂತೆ ಮನವಿ ಮಾಡಿದ್ದಾರೆ ಎಂದು ಗೊತ್ತಾಗಿದೆ. ಆದರೆ, ಸುದ್ದಿಗಾರರಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಅಲ್ಲಿಂದ ತೆರಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಕೂಡಾ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.