ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಂಪುಟ ವಿಸ್ತರಣೆ: ಮೇ 3ಕ್ಕೆ ಶಾ ಜತೆ ಚರ್ಚೆ’

Last Updated 29 ಏಪ್ರಿಲ್ 2022, 18:15 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮೇ 3ರಂದು ಬೆಂಗಳೂರಿಗೆ ಬರಲಿದ್ದು, ಆ ಸಂದರ್ಭದಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು ಈ ವಿಷಯ ತಿಳಿಸಿದರು.

‘ದೆಹಲಿಯಲ್ಲಿಶನಿವಾರ ನಡೆಯಲಿರುವ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಮುಖ್ಯನ್ಯಾಯಮೂರ್ತಿಗಳ ಸಮ್ಮೇಳನದಲ್ಲಿ ಭಾಗವಹಿಸಲಿದ್ದೇನೆ. ಈ ಸಂದರ್ಭದಲ್ಲಿ ವರಿಷ್ಠರ ಜತೆ ಚರ್ಚೆ ಮಾಡುವ ಸಾಧ್ಯತೆ ಇಲ್ಲ. ಅಮಿತ್‌ಶಾ ಅವರು ಬೆಂಗಳೂರಿಗೆ ಬಂದಾಗ ಈ ವಿಷಯ ಪ್ರಸ್ತಾಪಿಸುತ್ತೇನೆ’ ಎಂದು ತಿಳಿಸಿದ್ದಾರೆ.

ಶಾ ಅವರು ಬೆಂಗಳೂರಿನಲ್ಲಿ ಮೇ 3 ರಂದು ನೃಪತುಂಗ ವಿಶ್ವವಿದ್ಯಾಲಯವನ್ನು ಉದ್ಘಾಟಿಸಲಿದ್ದಾರೆ. ಬಳ್ಳಾರಿಯ ಫೊರೆನ್ಸಿಕ್‌ ಸೈನ್ಸ್‌ ಲ್ಯಾಬ್‌ ಅನ್ನು ವರ್ಚುವಲ್‌ ಆಗಿ ಉದ್ಘಾಟಿಸಲಿದ್ದು, ಸಂಜೆ 4ಕ್ಕೆ ಮಲ್ಲೇಶ್ವರದಲ್ಲಿರುವ ಪಕ್ಷದ ಕಚೇರಿಗೆ ಭೇಟಿ ನೀಡಲಿದ್ದಾರೆ. ಸಂಜೆ 5ಕ್ಕೆ ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್‌ ಸಮಾರೋಪದಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT