ಸೋಮವಾರ, ಮೇ 23, 2022
26 °C
ಚುನಾವಣೆಗಳ ಬಗ್ಗೆ ಗಮನ ಹರಿಸಲು ಅಮಿತ್‌ ಶಾ, ನಡ್ಡಾ ಸೂಚನೆ

ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್‌ ರಚನೆ ಆಗುವ ಸಾಧ್ಯತೆ ಇನ್ನಷ್ಟು ದೂರವಾಗಿದೆ. ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳೂ ಸೇರಿ ಎಲ್ಲ ರೀತಿಯ ಚುನಾವಣೆಗಳಿಗೂ ಸಿದ್ಧತೆ ಮಾಡಿಕೊಳ್ಳಲು ಗಮನಹರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಿಜೆಪಿ ವರಿಷ್ಠರು ಸೂಚನೆ ನೀಡಿದ್ದಾರೆ.

ಬೊಮ್ಮಾಯಿ ನವದೆಹಲಿಯಲ್ಲಿ ಬುಧವಾರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆಯ ವಿಷಯವನ್ನು ಪ್ರಸ್ತಾಪಿಸಿದರು. ಆದರೆ ಅವರು ಈ ವಿಷಯಕ್ಕೆ ಹೆಚ್ಚು ಗಮನ ನೀಡಲಿಲ್ಲ ಎಂದು ಮೂಲಗಳು ಹೇಳಿವೆ.

ಸುಪ್ರೀಂಕೋರ್ಟ್‌ ಆದೇಶದ ಪ್ರಕಾರ ಸದ್ಯವೇ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಬೇಕಾಗಿರುವುದರಿಂದ ಆ ಬಗ್ಗೆ ಗಮನ ಹರಿಸುವಂತೆ ಅಮಿತ್‌ ಶಾ ಅವರು ಸೂಚಿಸಿದ್ದು, ‘ಸಚಿವ ಸಂಪುಟದ ವಿಸ್ತರಣೆಯ ಬಗ್ಗೆ ಚಿಂತೆ ಬಿಡಿ’ ಎಂದು ಬೊಮ್ಮಾಯಿ ಅವರಿಗೆ ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು