ಸಿಎಂ ಬೊಮ್ಮಾಯಿ ಇಂದು ಸಂಜೆ ನವದೆಹಲಿಗೆ; ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಂಜೆ ನವದೆಹಲಿಗೆ ತೆರಳಲಿದ್ದಾರೆ. ದೆಹಲಿಯಿಂದ ವರಿಷ್ಠರ ಕರೆ ಬಂದರೆ ಹೋಗುವುದಾಗಿ ಬೊಮ್ಮಾಯಿ ಈ ಹಿಂದೆ ಹೇಳಿದ್ದರು.
ದಾವೋಸ್ಗೆ ತೆರಳಲು ಸಿದ್ಧತೆ ನಡೆಸಿದ್ದ ಮುಖ್ಯಮಂತ್ರಿ ಅವರು, ದೆಹಲಿಗೆ ದಿಢೀರ್ ತೆರಳುತ್ತಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಮೂಲಗಳ ಪ್ರಕಾರ ದಾವೋಸ್ಗೆ ಇದೇ 22ರ ಬೆಳಿಗ್ಗೆ ಪ್ರವಾಸ ಬೆಳೆಸಲಿದ್ದಾರೆ.
‘ಸಚಿವ ಸಂಪುಟ ವಿಸ್ತರಣೆ ಸಂಬಂಧ ಪಕ್ಷದ ವರಿಷ್ಠರನ್ನು ಸಂಪರ್ಕಿಸುತ್ತೇನೆ’ ಎಂದು ಹುಬ್ಬಳ್ಳಿಯಲ್ಲಿ ಭಾನುವಾರ ಹೇಳಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.